Advertisement

RBI ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೋಂಕು ದೃಢ

08:43 AM Oct 26, 2020 | Mithun PG |

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ( ಆರ್ ಬಿಐ)  ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೊಂಕು ತಗುಲಿರುವುದು ದೃಢಪಟ್ಟಿದೆ.

Advertisement

ಈ ಕುರಿತು ಟ್ವಿಟ್ವರ್ ಮೂಲಕ ಮಾಹಿತಿ ನೀಡಿದ ಅವರು, ಕೋವಿಡ್ ಪಾಸಿಟಿವ್ ಬಂದಿದ್ದು. ಆದರೇ ಯಾವುದೇ ರೋಗ ಲಕ್ಷಣಗಳಿಲ್ಲ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಶಕ್ತಿಕಾಂತ್ ದಾಸ್ ಇದೀಗ ಐಶೋಲೇಶನ್ ನಲ್ಲಿದ್ದು, ಮನೆಯಿಂದಲೇ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ. ಆರ್‌ಬಿಐನ ದಿನನಿತ್ಯದ ಕಾರ್ಯವು ಎಂದಿನಂತೆ ನಡೆಯುತ್ತದೆ.  ಮಾತ್ರವಲ್ಲದೆ ವಿಡಿಯೋ ಕಾನ್ಫರೆನ್ಸಿಂಗ್ ಮತ್ತು ದೂರವಾಣಿ ಕರೆಗಳ ಮೂಲಕ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಭಾರತದಲ್ಲಿ ಕೋವಿಡ್ ವೈರಸ್ ಪ್ರಕರಣಗಳು ಭಾನುವಾರ (ಅಕ್ಟೋಬರ್ 25) 78 ಲಕ್ಷ ದಾಟಿದೆ, ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 50,129 ಹೊಸ COVID-19 ಸೋಂಕುಗಳು ವರದಿಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next