ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆಗೆ 1,365 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ಕಟ್ಟಡ ನಿರ್ಮಾಣ ಸಹಿತ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪೂರಕ ವಾದ ಇತರ ಕಾರ್ಯ ಚಟುವಟಿಕೆಗಳ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಗೆ ಅನು ಮೋದನೆ ನೀಡಲಾಗಿದೆ ಎಂದು ವಿಕಾಸ ಸೌಧದಲ್ಲಿ ಶುಕ್ರವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಡಳಿತ ಮಂಡಳಿ ಸಭೆ ಯಲ್ಲಿ ಪಾಲ್ಗೊಂಡ ಅನಂತರ ಅವರು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಮಳೂರು, ಬಾಗಲಕೋಟೆ ಜಿಲ್ಲೆಯ ಬೆಳಗಲಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಮಾಚಿ ಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ಕ್ರೀಡಾ ವಸತಿ ಶಾಲೆಗಳನ್ನಾಗಿ ಪರಿವರ್ತಿಸ ಲಾಗುವುದು.
ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪಠ್ಯ ಪುಸ್ತಕ ಒದಗಿಸಲು ಅನು ದಾನ ಬಿಡುಗಡೆಗೆ ಸಭೆಯಲ್ಲಿ ಅನು ಮೋದನೆ ನೀಡಲಾಗಿದೆ. 12 ಏಕಲವ್ಯ ಮಾದರಿ ವಸತಿ ಶಾಲೆ ಗಳಲ್ಲಿ 6ರಿಂದ 12ನೇ ತರಗತಿಯ ವರೆಗೆ ಆಂಗ್ಲ ಮಾಧ್ಯಮ ದಲ್ಲಿ ಬೋಧಿಸ ಲಾಗುತ್ತಿದ್ದು, ಸಿಬಿಎಸ್‌ಇ ಪಠ್ಯಕ್ರಮ ವನ್ನು ಅಳ ವಡಿಸಿ ಕೊಳ್ಳಲು ಚಿಂತನೆ ನಡೆಸ ಲಾಗಿದೆ ಎಂದವರು ಹೇಳಿದರು.
ಸಲಹೆಗಾರರ ನೇಮಕ
ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ತಜ್ಞರಾದ ಡಾ| ಗುರುರಾಜ ಕರಜಗಿ ಅವ ರನ್ನು ಶೈಕ್ಷಣಿಕ ಸಲಹೆ ಗಾರ ರನ್ನಾಗಿ ಮತ್ತು ಸಾರ್ವ ಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇ ಶಕ ಬೆಳ್ಳಿಶೆಟ್ಟಿ ಅವರನ್ನು ಸಮಾ ಲೋಚಕ ರನ್ನಾಗಿ ನೇಮಿಸ ಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.