Advertisement

ವಸತಿ ಶಾಲೆ ಅಸ್ವಸ್ಥ ಮಕ್ಕಳು ಜಿಲ್ಲಾಸ್ಪತ್ರೆಗೆ ಸ್ಥಳಾಂತರ

03:50 PM Jun 10, 2022 | Shwetha M |

ವಿಜಯಪುರ: ಜಿಲ್ಲೆ ತಡವಲಗಾ ಕಸ್ತೂರಬಾ ಬಾಲಕಿಯರ ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದ ತಡವಲಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 25 ಮಕ್ಕಳಲ್ಲಿ ಐವರನ್ನು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಮಧ್ಯೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಧಿಕಾರಿ ಡಾ| ವಿ.ಬಿ. ದಾನಮ್ಮನವರ ಮಕ್ಕಳ ಯೋಗಕ್ಷೇಮ ವಿಚಾರಿಸಿ, ಧೈರ್ಯ ಹೇಳಿದರು.

Advertisement

ಇಂಡಿ ತಾಲೂಕಿನ ತಡವಲಗಾ ಗ್ರಾಮದ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ವಿದ್ಯಾಲಯದ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ವಸತಿ ಶಾಲೆಯಲ್ಲಿ ಉಪಹಾರ ಸೇವನೆ ಬಳಿಕ 25 ಬಾಲಕಿಯರು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ತಡವಲಗಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅಸ್ವಸ್ಥರಾಗಿದ್ದ ಮಕ್ಕಳಲ್ಲಿ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಸಂಜೆ ವಿಜಯಪುರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿ, ಚಿಕಿತ್ಸೆ ಕೊಡಲಾಗುತ್ತಿದೆ.

ವಿಷಯ ತಿಳಿದ ಜಿಲ್ಲಾಧಿಕಾರಿ ಡಾ| ವಿ.ಬಿ.ದಾನಮ್ಮವರ ಗುರುವಾರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದು, ಧೈರ್ಯ ತುಂಬಿದ್ದಾರೆ. ಬಳಿಕ ಸರ್ಕಾರಿ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ| ಎಸ್‌.ಎಲ್‌. ಲಕ್ಕಣ್ಣವರ ಅವರಿಂದ ಮಕ್ಕಳ ಆರೋಗ್ಯದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next