Advertisement
ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಕಾರ್ಯ ನಿರ್ವಹಣಾಕಾರಿ(ಸಿಇಒ) ಎನ್.ಶಿವಶಂಕರ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಗುರುವಾರ ನಡೆಸಿದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ.
Related Articles
Advertisement
ಬೆಂಗಳೂರಿನಲ್ಲಿ ಕೈಗಾರಿಕೆಗಳಿದ್ದರೆ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಸೇರಿದಂತೆ ದೂರದಿಂದ ಬರಲು ಸಿಬ್ಬಂದಿಗಳಿಗೆ ಅನಾನುಕೂಲವಾಗಲಿವೆ. ಕೈಗಾರಿಕಾ ಪ್ರದೇಶದಲ್ಲೇ ವಸತಿಗಳನ್ನು ನಿರ್ಮಿಸಿಕೊಟ್ಟರೆ ಸಮಯದ ಉಳಿತಾಯ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಪ್ರದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವಸತಿ ಸಮ್ಮುಚ್ಚಯಗಳು, ಆಸ್ಪತ್ರೆ, ಮಾಲ್‍ಗಳು, ಶಾಲಾ-ಕಾಲೇಜುಗಳು, ನೀರಿನ ಸೌಲಭ್ಯ ಸೇರಿದಂತೆ ಎಲ್ಲ ರೀತಿಯ ಸೌಲಭ್ಯವು ಇದರಲ್ಲಿ ಸಿಗಲಿವೆ ಹೇಳಿದರು.
ಶೀಘ್ರದಲ್ಲೇ ಉನ್ನತ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಲಾಗುವುದು. ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ಆಕರ್ಷಿಸುವ ವಿಷಯಗಳ ಬಗ್ಗೆ ಚರ್ಚಿಸುಲಾಗುವುದು. ಕೈಗಾರಿಕಾ ವಲಯ ಮತ್ತು ಹೂಡಿಕೆದಾರರ ಸ್ನೇಹಿ ವಾತಾವರಣದಲ್ಲಿ ರಾಜ್ಯವನ್ನು ಮುಂಚೂಣಿಯ ಸ್ಥಾನದಲ್ಲಿ ಕಾಯ್ದುಕೊಳ್ಳುವಲ್ಲಿ ಸರ್ಕಾರ ಬದ್ದವಾಗಿದೆ ಎಂದು ಆಶ್ವಾಸನೆ ನೀಡಿದರು.
ಕೈಗಾರಿಕಾ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡುವುದಾಗಿ ಭರವಸೆ ನೀಡಿದ ನಿರಾಣಿ, ಕರ್ನಾಟಕವು ಹೂಡಿಕೆದಾರರಿಗೆ ಆದ್ಯತೆಯ ತಾಣವಾಗಿದೆ. ಮುಂದಿನ ದಿನಗಳಲ್ಲಿ ಹೂಡಿಕೆದಾರ ಸ್ನೇಹಿ ಮತ್ತು ವ್ಯಾಪಾರ ಸ್ನೇಹಿ ಹಂತಗಳೊಂದಿಗೆ ನಾವು ಮತ್ತಷ್ಟು ಪ್ರಗತಿಯನ್ನು ಖಚಿತಪಡಿಸುತ್ತೇವೆ ಎಂದು ಭರವಸೆ ಕೊಟ್ಟರು.
ಕಾರ್ಯಕ್ರಮದಲ್ಲಿ ಬಾಷ್ ಲಿಮಿಟೆಡ್ ವ್ಯವಸ್ಥಾಪಕ ನಿದೇರ್ಶಕ ಹಾಗೂ ಭಾರತದ ಬಾಷ್ ಸಮೂಹ ಸಂಸ್ಥೆಯ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಹಾಗೂ ಬ್ರಿಗೇಡ್ ಎಂಟರ್ಪ್ರೈಸಸ್ ನ ವ್ಯವಸ್ಥಾಪಕ ನಿದೇರ್ಶಕ ಮತ್ತು ಅಧ್ಯಕ್ಷ ಎಂ.ಆರ್. ಜೈಶಂಕರ್ , ಬಿಸಿಐಸಿ ಅಧ್ಯಕ್ಷರಾದ ಟಿ.ಆರ್.ಪರಶುರಾಮನ್ ಉಪಸ್ಥಿತರಿದ್ದರು.