Advertisement
ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಬುಧವಾರ ಕೋವಿಡ್ ವಿಚಾರದಲ್ಲಿ ಜನರನ್ನು ದೇವರೇ ಕಾಪಾಡಬೇಕು ಎಂದು ನೀಡಿದ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಯಿಸಿದ ಶಿವಕುಮಾರ್ , ಶ್ರೀರಾಮುಲು ಅವರ ಹೇಳಿಕೆಯಿಂದ ಇಡೀ ರಾಜ್ಯ ತಲ್ಲಣಗೊಂಡಿದೆ. ಅಧಿಕಾರಕ್ಕಾಗಿ ಬಹಳ ಶ್ರಮ ವಹಿಸಿ ಸರ್ಕಾರ ರಚನೆ ಮಾಡಿದರು. ಈಗ ಕೋವಿಡ್ ವಿಚಾರದಲ್ಲಿ ನಾವು ಏನು ಮಾಡಲಿಕ್ಕೆ ಆಗುವುದಿಲ್ಲ ದೇವರೇ ಕಾಪಾಡಬೇಕು ಅಂತಾ ಮುಖ್ಯಮಂತ್ರಿಗಳ ತಂಡ ಹೇಳುತ್ತಿದೆ. ಇದು ಕೇವಲ ಶ್ರೀರಾಮುಲು ಅವರ ಹೇಳಿಕೆಯಲ್ಲ. ಅವರು ಸರ್ಕಾರದ ಧ್ವನಿಯಾಗಿ ಈ ಮಾತನ್ನು ಹೇಳಿದ್ದಾರೆ. ಈ ಹೇಳಿಕೆ ನೀಡಿದ ಮರುಕ್ಷಣದಿಂದಲೇ ಬಿಜೆಪಿ ಅಧಿಕಾರದಲ್ಲಿರಲು ಸಾಧ್ಯವಿಲ್ಲ. ಕೋವಿಡ್ ವಿಚಾರದಲ್ಲಿ ಜನರನ್ನು ದೇವರು ಕಾಪಾಡಬೇಕಾದರೆ, ನೀವು ಯಾಕೆ ಅಧಿಕಾರದಲ್ಲಿ ಇರಬೇಕು. ಜನರನ್ನು ನಿಮ್ಮಿಂದ ರಕ್ಷಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ ಎಂದು ಒತ್ತಾಯಿಸಿದ್ದಾರೆ.
Advertisement
ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ
04:34 PM Jul 16, 2020 | keerthan |
Advertisement
Udayavani is now on Telegram. Click here to join our channel and stay updated with the latest news.