Advertisement

ಮಾತೆ ಹೇಳಿಕೆ ವಾಪಸ್‌ ಪಡೆಯದಿದ್ದರೆ ರಾಜೀನಾಮೆ

07:15 AM Apr 09, 2018 | Team Udayavani |

ಯಾದಗಿರಿ: ಲಿಂಗಾಯತರು ಕಾಂಗ್ರೆಸ್‌ಗೆ ಮತ ನೀಡಬೇಕೆಂಬ ಮಾತೆ ಮಹಾದೇವಿ ಹೇಳಿಕೆಯನ್ನು ಲಿಂಗಾಯತ ಮಹಾಸಭಾ
ಅಧ್ಯಕ್ಷ ಹಾಗೂ ಮಾಜಿ ಸಚಿವ ಬಸವರಾಜ ಹೊರಟ್ಟಿ ವಿರೋಧಿಸಿದ್ದಾರೆ. 

Advertisement

ಗುರುಮಠಕಲ್‌ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ರಾಜಕೀಯ ರಹಿತವಾಗಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಅಂದ ಮಾತ್ರಕ್ಕೆ ಲಿಂಗಾಯತರು ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಹೇಳುವುದನ್ನು ಒಪ್ಪಲಾಗದು. ಒಂದು ವೇಳೆ ಮಾತೆ ಮಹಾದೇವಿ ನಿಲುವಿನಲ್ಲಿ ಬದಲಾವಣೆ ಆಗದಿದ್ದರೆ, ತಾವು ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬರುತ್ತೇನೆ. ಬೆಂಗಳೂರಿನಲ್ಲಿ ನಡೆದ ಸಭೆ ಯಲ್ಲಿ ನಾನು ಭಾಗವಹಿಸಿರಲಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next