ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಹಂಗಾಮಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಬುಧವಾರ ನಗರದ ಹಲಸೂರಿನಲ್ಲಿರುವ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಿದೆ. ಯಾವುದೇ ಕಾರಣಕ್ಕೆ ಹಿಂಪಡೆಯುವುದಿಲ್ಲ. ಪಕ್ಷದ ಹೈಕಮಾಂಡ್ ಯಾರನ್ನೇ ಅಧ್ಯಕ್ಷರನ್ನಾಗಿ ನೇಮಿಸಿದರೂ ಅದನ್ನು ಒಪ್ಪಿಕೊಂಡು ನೂತನ ಅಧ್ಯಕ್ಷರಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಹಳ ದಿನ ಖಾಲಿ ಬಿಡಬಾರದು. ಶೀಘ್ರವೇ ಹೈಕಮಾಂಡ್ ಸಮರ್ಥ ನಾಯಕರನ್ನು ಆಯ್ಕೆ ಮಾಡಬೇಕು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಈಗಾಗಲೇ ಹದಗೆಟ್ಟು ಹಳ್ಳ ಹಿಡಿದಿದೆ. ವಿರೋಧ ಪಕ್ಷವಾಗಿ ನಾವು ಗಟ್ಟಿಯಾಗಿ ಧ್ವನಿಯೆತ್ತಬೇಕು ಎಂದರು.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರು, ತಮ್ಮ ಸಮುದಾಯಕ್ಕೆ ಸಚಿವಸ್ಥಾನದ ವಿಚಾರವಾಗಿ ಸಿಎಂಗೆ ಒತ್ತಡ ಹಾಕಿದ್ದು ಸರಿಯಲ್ಲ. ಒಂದು ಸಮಾಜ ನಿಮ್ಮ ಕೈಬಿಡುತ್ತೆ ಎಂದು ಹೇಳ ಬಾರ ದಿತ್ತು. ಈ ರೀತಿಯ ಒತ್ತಡದಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ.
-ದಿನೇಶ್ ಗುಂಡೂರಾವ್