Advertisement

ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಹಾಸ್ಯಾಸ್ಪದ: ರವಿಕುಮಾರ್‌

07:19 PM Nov 03, 2021 | Team Udayavani |

ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಗೆದ್ದು ಒಂದು ಕ್ಷೇತ್ರದಲ್ಲಿ ಸೋತಿದ್ದರೂ, ಬಿಜೆಪಿಯ ಮತ ಪ್ರಮಾಣ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜನರು ಬಿಜೆಪಿ ಪರವಾಗಿದ್ದಾರೆ. ಜನಪರ ಕಾರ್ಯಕ್ರಮಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ಪ್ರಧಾನಿ ನರೇಂದ್ರ ಮೋದಿಯವರು, ರೈತಪರ ಹೋರಾಟಗಾರರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ದೂರದೃಷ್ಟಿಯಿಂದ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಹಳೆ ವೈಷಮ್ಯ :ಜೈಲಿನಿಂದ ಹೊರ ಬಂದ ವ್ಯಕ್ತಿಯ ಕೊಚ್ಚಿ ಭೀಕರ ಕೊಲೆ

ಕೇವಲ ಒಂದು ಚುನಾವಣೆಯಲ್ಲಿ ಗೆದ್ದೊಡನೆ ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುವುದು ಅತ್ಯಂತ ಹಾಸ್ಯಾಸ್ಪದ. ಬೂತ್‌ ಮಟ್ಟದಲ್ಲಿ ಪಕ್ಷ ಬಲವಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸದೃಢವಾಗಿ ಬೆಳೆಸಿದ್ದಾರೆ. ಆದ್ದರಿಂದ ರಾಜ್ಯಾಧ್ಯಕ್ಷರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಬೆಳವಣಿಗೆಯನ್ನು ಸಹಿಸದವರು ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುತ್ತಿರುವುದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next