Advertisement

ಮೈತ್ರಿ ಸರ್ಕಾರದ ನಡೆಗೆ ಬೇಸತ್ತು ಶಾಸಕರ ರಾಜೀನಾಮೆ

11:51 PM Jul 14, 2019 | Team Udayavani |

ಲಿಂಗಸುಗೂರು: ಮೈತ್ರಿ ಸರ್ಕಾರದ ನಡೆಯಿಂದ ರೋಸಿ ಹೋದ ಜೆಡಿಎಸ್‌, ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿನ ಕಚ್ಚಾಟ, ಸರ್ಕಾರದಲ್ಲಿ ತಮ್ಮನ್ನು ನಿರ್ಲಕ್ಷ ಮಾಡುತ್ತಿದ್ದಾರೆ.

Advertisement

ಅವರವರ ಕ್ಷೇತ್ರಗಳಲ್ಲಿ ಕೆಲಸವಾಗುತ್ತಿಲ್ಲ ಎಂದು ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕಾಂಗ್ರೆಸ್‌, ಜೆಡಿಎಸ್‌ ಶಾಸಕರು ನಮ್ಮೆದುರು ಅಸಮಾಧಾನ ತೋಡಿಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ನಡೆಗೆ ಬೇಸತ್ತು ಸ್ವತ: ರಾಜೀನಾಮೆ ಕೊಡುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್‌ ಮಾಡುತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next