Advertisement

ಬೇಡಿಕೆ ಈಡೇರಿಸದಿದ್ದಲ್ಲಿ ಶಾಸಕರ ರಾಜೀನಾಮೆ

11:55 PM Jul 13, 2019 | Lakshmi GovindaRaj |

ದಾವಣಗೆರೆ: ರಾಜ್ಯದಲ್ಲಿ ಯಾವುದೇ ಸರ್ಕಾರ ಇರಲಿ. ನಮ್ಮ ಬೇಡಿಕೆಯನ್ನು ಎರಡು ತಿಂಗಳಲ್ಲಿ ಈಡೇರಿಸದಿದ್ದಲ್ಲಿ ನಮ್ಮ ಸಮಾಜದ ಎಲ್ಲ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಡಿಕೆ ಈಡೇರಿಸುವಲ್ಲಿ ವಿಳಂಬವಾದಲ್ಲಿ ವಾಲ್ಮೀಕಿ ಸಮಾಜದ ಎಲ್ಲ 15 ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದರು.

ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇ.7.5ಕ್ಕೆ ಏರಿಕೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗಾಗಿ ರಾಜನಹಳ್ಳಿ ಗುರುಪೀಠದಿಂದ ರಾಜಧಾನಿ ಬೆಂಗಳೂರಿನವರೆಗೆ ಪಾದಯಾತ್ರೆ ಕೈಗೊಂಡು,

ಅಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಸರ್ಕಾರ 2 ತಿಂಗಳ ಸಮಯ ಕೇಳಿತ್ತು. ಕೇಳಿದ ಸಮಯದಲ್ಲೇ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಸಮಾಜದ ಎಲ್ಲ ಶಾಸಕರು ರಾಜೀನಾಮೆ ನೀಡುವುದು ಶತ: ಸಿದ್ಧ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next