Advertisement

ಸಕ್ರಿಯ ರಾಜಕಾರಣಕ್ಕೆ ವಿ.ಆರ್.ಸುದರ್ಶನ್ ಗುಡ್ ಬೈ

11:55 AM Apr 15, 2023 | Team Udayavani |

ಕೋಲಾರ: ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ.

Advertisement

ಕೋಲಾರ ನಗರದಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು ಕಳೆದ ಹಲವಾರು ದಶಕಗಳಿಂದ ಈಗ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಂಡು ಈಗ  ಕಾರಣಾಂತರಗಳಿಂದ ದೂರ ಉಳಿಯುವ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದರು.

ಈ ಕುರಿತು ಹೆಚ್ಚಿನ ವಿವರಗಳನ್ನು ಏಪ್ರಿಲ್ 25- 26ರ ನಂತರ ಮಾತನಾಡುವುದಾಗಿ ಹೇಳಿದ್ದಾರೆ.

ರಾಜಕಾರಣದಿಂದ ದೂರ ಉಳಿದರೂ ಸಾಮಾಜಿಕ ಹಾಗೂ ಅಭಿವೃದ್ಧಿಪರ ಸಂವಿಧಾನಬದ್ಧ ಕಾರ್ಯಕ್ರಮಗಳು ಮತ್ತು ಚಳುವಳಿಗಳಲ್ಲಿ ಭಾಗವಹಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಅವರು ದಿಢೀರ್ ಎಂದು ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿರುವುದು, ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿರುವುದು ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next