Advertisement

ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ

05:49 AM Jun 26, 2020 | Lakshmi GovindaRaj |

ಮೈಸೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ಖಾಯಂ ಹಾಗೂ ಗುತ್ತಿಗೆ ಪೌರಕಾರ್ಮಿಕರ ಸಂಘದ ಸಹಯೋಗದಲ್ಲಿ ಮೈಸೂರು ಮಹಾನಗರ ಪಾಲಿಕೆ ಒಳಚರಂಡಿ ಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ  ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸೇರಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದದರು.

Advertisement

ಮಾಜಿ ಮಹಾಪೌರ ನಾರಾಯಣ್‌, ಸರ್ಕಾರ ನಮಗೆ ಆಗುತ್ತಿರುವ ವಂಚನೆಗಳ ಬಗ್ಗೆ ಗಮನ ಹರಿಸಿ ಕ್ರಮ ತೆಗೆದುಕೊಳ್ಳದಿದ್ದರೆ 15  ದಿನಗಳ ಬಳಿಕ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ನಗರಪಾಲಿಕೆಯಲ್ಲಿ 65 ವಾರ್ಡ್‌ಗಳಿವೆ. ನಗರ ವ್ಯಾಪ್ತಿಗೆ ಬರುವ ಕೊಳವೆ ಮಾರ್ಗಕ್ಕೆ ಸುಮಾರು 231 ಜನ ಒಳಚರಂಡಿ  ಕಾರ್ಮಿಕರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇವೆ.

ಮೈಸೂರು ಮಹಾನಗರ ಪಾಲಿಕೆಗೆ ಸ್ವತ್ಛ ಭಾರತ ಅಭಿಯಾನದಲ್ಲಿ ಪ್ರಶಸ್ತಿ ಬಂದಾಗಲೂ ಒಳಚರಂಡಿ ಕಾರ್ಮಿಕರನ್ನು ಕಡೆಗಣಿಸಲಾಗಿದೆ. ಒಳಚರಂಡಿ ಕಾರ್ಮಿಕರಿಗೆ ಉಪಾಹಾರ ಭತ್ಯೆ  ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದರು. ಒಳಚರಂಡಿ ವಿಭಾಗದಲ್ಲಿ 231 ಹುದ್ದೆಗಳು ಖಾಲಿ ಇವೆ. ಎಲ್ಲಾ ಒಳಚರಂಡಿ ಕಾರ್ಮಿಕರನ್ನು ಖಾಯಂ ಮಾಡಿ ಗುತ್ತಿಗೆ ಪೌರಕರ್ಮಿಕರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನೂ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಶಾಸಕ ನಾಗೇಂದ್ರ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಸಮಸ್ಯೆ ಆಲಿಸಿ, ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಒಳಚರಂಡಿ ಕಾರ್ಮಿಕರ ಸಂಘದ  ಸದಸ್ಯರಾದ ಮಾರ, ಆರುಗಂ, ಮಹದೇವ, ಶಿವಣ್ಣ, ಶ್ರೀನಿವಾಸ, ಕುಮಾರಸ್ವಾಮಿ, ಗಣೇಶ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next