Advertisement
ಅವರು ಮಂಗಳವಾರ ಜಿ.ಪಂ. ಸಭಾಂಗಣ ದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಯು ಯಾವ ಸಂದರ್ಭದಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಬಹುದು? ಯಾವ ಚಿಕಿತ್ಸೆಗೆ ರೆಫರಲ್ ಪತ್ರ ತರಬೇಕು? ವೈದ್ಯರು ಯೋಜನೆಯಲ್ಲಿನ ಯಾವ ಕಾಯಿಲೆಗಳಿಗೆ ರೆಫರಲ್ ಪತ್ರ ನೀಡಬೇಕು? ತುರ್ತು ಸಂದರ್ಭದಲ್ಲಿ ಎಲ್ಲಿ ದಾಖಲಾಗಬೇಕು? ಎಂಬ ಬಗ್ಗೆ ರೋಗಿ ಹಾಗೂ ವೈದ್ಯರಿಗೂ ಸಹ ಹಲವು ಗೊಂದಲಗಳಿದ್ದು, ಇದನ್ನು ಬಗೆಹರಿಸಲು ಜಿಲ್ಲೆಯ ಸರಕಾರಿ ವೈದ್ಯರಿಗೆ ಶೀಘ್ರದಲ್ಲಿ ತರಬೇತಿ ಆಯೋಜಿಸಿ ಎಂದು ದಿನಕರ ಬಾಬು ಸೂಚಿಸಿದರು. ಜಿಲ್ಲೆಯ ಎಲ್ಲ ಆ್ಯಂಬುಲೆನ್ಸ್ ಚಾಲಕರಿಗೂ ಸಹ ತರಬೇತಿ ಆಯೋಜಿಸಿ, ಯೋಜನೆಯ ಸಮಗ್ರ ಮಾಹಿತಿ ನೀಡುವಂತೆ ಜಿ.ಪಂ. ಸಿಇಒ ಡಾ| ನವೀನ್ ಭಟ್ ತಿಳಿಸಿದರು.
Related Articles
ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಇದುವರೆಗೆ ಶೇ. 137ರಷ್ಟು ಸಾಧನೆ ಅಗಿದ್ದು, ಜಿಲ್ಲೆಯ ಎಲ್ಲ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿನ ಕೆರೆ ಮತ್ತು ತೋಡುಗಳ ಹೂಳೆ ತ್ತುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ತೆಗೆದುಕೊಳ್ಳುವಂತೆ ತಿಳಿಸಿದ ಅಧ್ಯಕ್ಷರು, ಹೂಳೆತ್ತಿದ ಅನಂತರ ಮಣ್ಣಿನಿಂದ ಜೆಡ್ಡುಗಳನ್ನು ನಿರ್ಮಿಸಬೇಕು. ಜಿಲ್ಲೆಯಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಉದ್ಯೋಗ ಖಾತರಿ ಯೋಜನೆಯಿಂದ ಬಾವಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಿ ಎಂದರು.
Advertisement
ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಲ್ಲಿ ಒಣ ತ್ಯಾಜ್ಯ ಸಂಗ್ರಹ ನಡೆಯುತ್ತಿದ್ದು, ಕಾರ್ಕಳದಲ್ಲಿ ಎಂಆರ್‌ಎಫ್ ಕಾಮಗಾರಿ ಪ್ರಗತಿಯಲ್ಲಿದ್ದು, ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು.
ಶಾಲಾ ಹಾಜರಾತಿ: 3ನೇ ಸ್ಥಾನಜಿಲ್ಲೆಯಲ್ಲಿ 6ನೇ ತರಗತಿಯಿಂದ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ತೆರೆದಿದ್ದು, ಇದುವರೆಗೂ ಯಾವುದೇ ಮಕ್ಕಳಲ್ಲಿ ಕೋವಿಡ್ ಕಂಡು ಬಂದಿರುವುದಿಲ್ಲ. ಎಸ್‌ಒಪಿ ಪ್ರಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣದಲ್ಲಿ ಜಿಲ್ಲೆಯು ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಡಿಡಿಪಿಐ ಮಾಹಿತಿ ನೀಡಿದರು. ಖಾಸಗಿ ಶಾಲೆಗಳಲ್ಲಿ ತರಗತಿಗೆ ಹಾಜರಾಗದೇ ಆನ್‌ಲೈನ್ ತರಗತಿಯಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಹೇಳಿದರು. ಮ್ಯಾನುವೆಲ್ ಸ್ಕಾವೆಂಜರ್ ನಿಷೇಧ
ಕುರಿತ ಕರಪತ್ರವನ್ನು ಬಿಡುಗಡೆಗೊಳಿ ಸಲಾಯಿತು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಉಪ ಕಾರ್ಯದರ್ಶಿ ಕಿರಣ್ ಫಡೆ°àಕರ್ ಉಪಸ್ಥಿತರಿದ್ದರು.