ಬುಧವಾರ ರೈತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 156 ತಾಲೂಕಿನಲ್ಲಿ ರೈತರು ಬರದಿಂದ ತತ್ತರಿಸಿದ್ದಾರೆ. ಮಳೆಯಿಲ್ಲದೆ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ.
Advertisement
ಜಾನುವಾರುಗಳಿಗೆ ಮೇವಿಲ್ಲದೆ ಅವುಗಳನ್ನು ಕಸಾಯಿಖಾನೆಗೆ ಮಾರುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಶಾಸಕರು ರೆಸಾರ್ಟ್‌ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವುದು ನಾಚಿಕೆಗೇಡಿನ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಜು.21ರಂದು ಬೆಳಗಾವಿಯಲ್ಲಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಖ್ಯಾತ ಜಲತಜ್ಞ ರಾಜೇಂದ್ರ ಸಿಂಗ್ ಸಮಾವೇಶ ಉದ್ಘಾಟಿಸಲಿದ್ದು, ಇವರ ಮಾರ್ಗದರ್ಶನದಲ್ಲಿ ರೈತರಿಗೆ ಶಿಬಿರಗಳನ್ನು ಏರ್ಪಡಿಸಿ ಬರಮುಕ್ತ ಕರ್ನಾಟಕ ಮಾಡಲು ಪಣ ತೊಡಲಾಗುವುದು ಎಂದರು.