ಜೈಪುರ: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿ ಕಾಂಗ್ರೆಸ್ ತಮ್ಮ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ ಬೆನ್ನಲ್ಲೇ ರಾಜಸ್ಥಾನದಲ್ಲೂ ಆಡಳಿತಾರೂಢ ಕಾಂಗ್ರೆಸ್ ಕೂಡ ಇದೇ ಧೋರಣೆಯನ್ನು ಅನುಸರಿಸಿದೆ. ಜೈಪುರದ ಶಿವವಿಲಾಸ್ ರೆಸಾರ್ಟ್‌ಗೆ ರಾಜಸ್ಥಾನದ ಕಾಂಗ್ರೆಸ್ ಶಾಸಕರನ್ನು ಶಿಫ್ಟ್ ಮಾಡಲಾಗಿದೆ. ಏತನ್ಮಧ್ಯೆ, ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ “ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ 25 ಕೋಟಿ ರೂ. ಆಮಿಷವೊಡ್ಡುತ್ತಿದೆ. ಮುಂಗಡವಾಗಿ 10 ಕೋಟಿ ರೂ. ನೀಡುವುದಾಗಿ ನಂಬಿಸುತ್ತಿದೆ. ಮಧ್ಯಪ್ರದೇಶದ ರೀತಿಯಲ್ಲಿ ಶಾಸಕರನ್ನು ಖರೀದಿಸಲು ಮುಂದಾಗಿದೆ. ಇದಕ್ಕಾಗಿ ದೆಹಲಿಯಿಂದ ಜೈಪುರಕ್ಕೆ ದೊಡ್ಡ ಪ್ರಮಾಣದಲ್ಲಿ ಹಣ ರವಾನೆಯಾಗಿದೆ. ಬಿಜೆಪಿಯ ಕುತಂತ್ರಗಳು ಫಲಿಸುವುದಿಲ್ಲ. ನಾವು ಒಗ್ಗಟ್ಟಾಗಿದ್ದೇವೆ’ ಎಂದು ತಿಳಿಸಿದ್ದಾರೆ.
90 ಕಾಂಗ್ರೆಸ್ ಶಾಸಕರು ಹಾಗೂ ಪಕ್ಷೇತರ ಶಾಸಕರನ್ನು ಬುಧವಾರ ಸಂಜೆಯೇ ರೆಸಾರ್ಟ್‌ಗೆ ಕಳುಹಿಸಲಾಗಿದೆ. ತಾವು ಕಾಂಗ್ರೆಸ್ ಜತೆ ಇದ್ದೇವೆ ಎಂದು ಪಕ್ಷೇತರ ಶಾಸಕರು ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಈ ಕುರಿತು ಆತಂಕ ಪಡಬೇಕಿಲ್ಲ ಎಂದಿದ್ದಾರೆ. ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಲ್ಲಿ ಕಾಂಗ್ರೆಸ್‌ನಿಂದ ಕರ್ನಾಟಕ ಉಸ್ತುವಾರಿಯಾಗಿರುವ ಕೆ.ಸಿ.ವೇಣುಗೋಪಾಲ್ ಮತ್ತು ನೀರಜ್‌ದಾಂಗಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಶಾಸಕರು ಜೈಪುರ ರೆಸಾರ್ಟ್‌ಗೆ ಶಿಫ್ಟ್
ಶಾಸಕರ ಖರೀದಿಗೆ 25 ಕೋಟಿ ರೂ.ಆಫರ್
ಬಿಜೆಪಿ ವಿರುದ್ಧ ಸಿಎಂ ಗೆಹ್ಲೋಟ್ ವಾಗ್ಧಾಳಿ