Advertisement

ಹಿರಿಯ ನಾಗರಿಕರಿಗೆ ಸಂಪನ್ಮೂಲ ಕೇಂದ್ರ

07:15 AM Oct 02, 2017 | Team Udayavani |

ಬೆಂಗಳೂರು: ಹಿರಿಯ ನಾಗರಿಕರ ಆರೋಗ್ಯ, ಕಾನೂನು ಹಾಗೂ ಮಾನಸಿಕ ಒತ್ತಡಕ್ಕೆ ಸಂಬಂಧಿಸಿದ ಸಮಸ್ಯೆ ನಿವಾರಿಸಲು ನಿಮ್ಹಾನ್ಸ್‌ ಸಹಯೋಗದಲ್ಲಿ ಹಿರಿಯ ನಾಗರಿಕರ ಸಂಪನ್ಮೂಲ ಕೇಂದ್ರ ತೆರೆಯಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಹಿರಿಯ ನಾಗರಿಕರ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಎಲ್ಲಾ ರೀತಿಯಲ್ಲೂ ಸ್ಪಂದಿಸುವ ಉದ್ದೇಶದಿಂದ ರಾಜ್ಯ ಹಿರಿಯ ನಾಗರಿಕರ ಸಂಪನ್ಮೂಲ ಕೇಂದ್ರವನ್ನು ನಿಮ್ಹಾನ್ಸ್‌ ಸಹಯೋಗದಲ್ಲಿ
ಅ.4ರಂದು ಆರಂಭಿಸಲಿದ್ದೇವೆ ಎಂದು ಹೇಳಿದರು.

Advertisement

ಬೆಳಗಾವಿ ಮತ್ತು ಕಲಬುರಗಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಹಿರಿಯ ನಾಗರಿಕರ ಸಹಾಯವಾಣಿ ತೆರೆದಿದ್ದೇವೆ. 1090ಗೆ ಕರೆ ಮಾಡಿ ಹಿರಿಯ ನಾಗರಿಕರು ತಮ್ಮ ಸಮಸ್ಯೆಯನ್ನು ಮುಕ್ತವಾಗಿ ಹೇಳಿಕೊಳ್ಳಬಹುದು. ಇದರ
ಅನುದಾನವನ್ನು 3.60 ಲಕ್ಷದಿಂದ 7.15ಲಕ್ಷಕ್ಕೆ ಏರಿಕೆ ಮಾಡಿದ್ದೇವೆ. ಕಲಬುರಗಿ, ಬೆಳಗಾವಿ, ಬೆಂಗಳೂರು ಮತ್ತು ಧಾರವಾಡದಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ತೆರೆದಿದ್ದೇವೆ. ಇದರ ಅನುದಾನವನ್ನು 4.15ಲಕ್ಷದಿಂದ 11.20 ಲಕ್ಷಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ನೀಡಿದರು. 

ವೃದಾಟಛಿಶ್ರಮಕ್ಕೆ ನೀಡುತ್ತಿದ್ದ ಅನುದಾನವನ್ನು 2ಲಕ್ಷದಿಂದ 8 ಲಕ್ಷಕ್ಕೆ ಏರಿಸಿದ್ದೇವೆ. ಹಿರಿಯ ನಾಗರಿಕರ ಜೀವಮಾನ ಸಾಧನೆಯ ರಾಜ್ಯ ಪ್ರಶಸ್ತಿಯ ಮೊತ್ತವನ್ನು 10 ಸಾವಿರದಿಂದ ಒಂದು ಲಕ್ಷಕ್ಕೆ ಏರಿಸಿದ್ದೇವೆ. ಮನುಷ್ಯ ಹುಟ್ಟನ್ನು ಖುಷಿ
ಮತ್ತು ಸಂಭ್ರಮದಿಂದ ಸ್ವೀಕರಿಸುವಂತೆ ಮುಪ್ಪನ್ನು ಸಂತೋಷದಿಂದಲೇ ಸ್ವಾಗತಿಸಬೇಕು. ಮುಪ್ಪಿನ ಅನುಭವದ ಸುಖವನ್ನು ಇತರರು ಪಡೆಯಬೇಕು. ಹಿರಿಯ ನಾಗರಿಕರನ್ನು ಕಡೆಗಣಿಸುವುದು ಸರಿಯಲ್ಲ. ಹಿರಿಯರ ತ್ಯಾಗದ ಅರ್ಥವನ್ನು ಮಕ್ಕಳಿಗೆ ತಿಳಿಸಿ, ಅವರಲ್ಲಿ ನೈತಿಕ ಪ್ರಜ್ಞೆ ಬೆಳೆಸಬೇಕು ಎಂದು ಹೇಳಿದರು.

ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಕೂಡುಕುಟುಂಬ ವ್ಯವಸ್ಥೆ ಕಣ್ಮರೆಯಾಗುತ್ತಿದೆ. ಇದರಿಂದ ಹಿರಿಯ ನಾಗರಿಕೆರಿಗೆ ಹೆಚ್ಚಿನ ನೋವಾಗುತ್ತಿದೆ, ಮಾತ್ರವಲ್ಲದೇ ಹಿರಿಯ ನಾಗರಿಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ. ಮಕ್ಕಳು ತಮ್ಮ ಜವಾಬ್ದಾರಿಯನ್ನು ಮರೆಯುತ್ತಿದ್ದಾರೆ. ಕೇಂದ್ರ ಅಥವಾ ರಾಜ್ಯ ಸರ್ಕಾರವು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಎಷ್ಟೇ ಯೋಜನೆ ತಂದರೂ, ಅದು ಪರಿಪೂರ್ಣವಾಗಬೇಕಾದರೆ ಮಕ್ಕಳು ತಮ್ಮ
ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಜಾನಪದ ಕಲಾವಿದೆ ಪದ್ಮಶ್ರೀ ಸುಕ್ರಿಬೊಮ್ಮಗೌಡ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಶ್ರಾಂತ
ನ್ಯಾಯಮೂರ್ತಿ ಅರಳಿ ನಾಗರಾಜ, ಡಾ.ಬಿ.ಜಿ.ಸುಧಾ, ಎಚ್‌.ರಾಮೇಗೌಡ, ಕೆ.ಎ.ನಾಗೇಶ್‌, ಲಕ್ಷ್ಮೀಬಾಯಿ, ನಿಮ್ಹಾನ್ಸ್‌ ಸಂಸ್ಥೆಯ ಪರವಾಗಿ ಅದರ ನಿರ್ದೇಶಕ ಡಾ.ಗಂಗಾಧರ್‌ ಅವರನ್ನು ಸನ್ಮಾನಿಸಲಾಯಿತು.
ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಮಹಾದೇವನ್‌, ನಿರ್ದೇಶಕ ಡಾ.ಸಿದ್ದರಾಜು ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next