Advertisement

ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ

11:18 AM Jul 06, 2019 | Suhan S |

ಹಿರೇಕೆರೂರ: ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಜತೆಗೆ ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು.

Advertisement

ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ಸಕಾಲದಲ್ಲಿ ಕೆಲಸ ನೀಡಬೇಕು. ವಸತಿ ರಹಿತರಿಗೆ ಸರ್ಕಾರದ ಯೋಜನೆಗಳಲ್ಲಿ ಅಗತ್ಯ ವಸತಿ ಸೌಲಭ್ಯ ಕಲ್ಪಿಸಬೇಕು. ಪ್ರಧಾನ ಮಂತ್ರಿ ಕಿಸಾನ್‌ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಲೀಲಾವತಿ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ತಹಶೀಲ್ದಾರ್‌ ಆರ್‌.ಎಚ್.ಭಾಗವಾನ್‌, ರಟ್ಟೀಹಳ್ಳಿ ತಹಶೀಲ್ದಾರ್‌ ಚಂದ್ರಶೇಖರ ಆರ್‌.ಜಿ., ತಾಪಂ ಇಒ ಸಂತೋಷಕುಮಾರ ತಳಕಲ್ ಸೇರಿದಂತೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next