ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಗುರುವಾರ ಮಾಹಿತಿ ಪಡೆದು ಮುಖ್ಯಮಂತ್ರಿ ಅವರು ಮಾತನಾಡಿದರು.ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ನಿರ್ದೇಶ ನೀಡಿದರು.
Advertisement
ಕಾಫಿ ಬೆಳೆಗಾರರಿಗೆ ಪರಿಹಾರ ವಿತರಣೆ ಮಾಡಬೇಕು. ಮಳೆಯಿಂದಾಗಿರುವ ನಷ್ಟ ಸಂಬಂಧ ಕಾಫಿ ಬೆಳೆಗಾರರನ್ನು ರಕ್ಷಣೆ ಮಾಡಬೇಕು. ಪರಿಸರ ಸಂರಕ್ಷಣೆಯು ಸಹ ಮಾಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದರು. ಮಳೆಹಾನಿ ಪರಿಹಾರ ಸಂಬಂಧಇಸಿದಂತೆ ತಹಶೀಲ್ದಾರರು ನೇರವಾಗಿ ಪರಿಹಾರ ವಿತರಣೆ ಮಾಡುವಂತಾಗಬೇಕು. ಉಪವಿಭಾಗಾಧಿಕಾರಿಯವರ ನೇತƒತ್ವದಲ್ಲಿ ಸಮಿತಿ ಅಗತ್ಯವಿಲ್ಲ ಎಂದು ಶಾಸಕ ಕೆ.ಜಿ.ಬೋಪಯ್ಯ ಸಲಹೆ ಮಾಡಿದರು. ಪ್ರಥಮ ದರ್ಜೆ ಕಾಲೇಜುಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪ್ರೌಢಶಾಲೆಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ಆ ನಿಟ್ಟಿನಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೂ ಅನುಮತಿ ನೀಡಲಾಗಿದೆ ಎಂದು ಎಚ್.ಡಿ.ರೇವಣ್ಣ ಅವರು ತಿಳಿಸಿದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಕೊಡವ ಹೆರಿಟೇಜ್ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು ಕೊಡವ ಹೆರಿಟೇಜ್ ಕಟ್ಟಡ ಸಂಬಂಧ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು,ಈ ಸಂಬಂಧ ವರದಿ ಕಳುಹಿಸಿ ಕೊಡುವಂತೆ ಲೋಕೋಪಯೋಗಿ ಇಲಾಖೆಯ ಇಇಗೆ ಅವರು ಸೂಚನೆ ನೀಡಿದರು. ಮೈಸೂರು-ಮಡಿಕೇರಿ-ಮಾಣಿ ಮಾರ್ಗದ ರಸ್ತೆ ಕಾಮಗಾರಿಗೆ ಡಿಪಿಆರ್. ಕರೆದು ಟೆಂಡರ್ ಆಹ್ವಾನಿಸುವಂತೆ ಲೋಕೋಪಯೋಗಿ ಎಂಜಿನಿಯರ್‌ಗಳಿಗೆ ಎಚ್.ಡಿ.ರೇವಣ್ಣ ಅವರು ಸೂಚನೆ ನೀಡಿದರು. ಕೊಡ್ಲಿಪೇಟೆ- ಮಾಕುಟ್ಟ ರಸ್ತೆ ನಿರ್ಮಾಣ ಮಾಡಲು ಕೈಗೆತ್ತಿಕೊಳ್ಳಬೇಕಿದೆ. ಹಾಗೆಯೇ ಪಾಣತ್ತೂರು- ಕರಿಕೆ-ಭಾಗ ಮಂಡಲ ರಸ್ತೆ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಗಮನಕ್ಕೆ ತಂದರು.
ಹಮ್ಮಿಯಾಲ-ಮುಟ್ಲು ಭಾಗದಲ್ಲಿ ಭತ್ತ ಬೆಳೆ ನಾಶವಾಗಿದ್ದು, ಈ ಪ್ರದೇಶಗಳಿಗೆ ಭೇಟಿ ನೀಡಿದ್ದೀರಾ ಎಂದು ಕೃಷಿ ಇಲಾಖೆ ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದರು.
ತಹಶೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಬೇಕು ಎಂದು ಸಚಿವ ಎಚ್..ಡಿ.ರೇವಣ್ಣ ಅವರು ಸೂಚನೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಬೋಜೇಗೌಡ, ಜಿಲ್ಲಾ ಪಂಚಾ ಯತ್ ಅಧ್ಯಕ್ಷ ಬಿ.ಎ.ಹರೀಶ್ ಅವರು ಮಾತನಾಡಿದರು.
Related Articles
Advertisement
326 ಕೋಟಿ ರೂ. ಅಂದಾಜು ನಷ್ಟ ಮಳೆಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ವಾಸದ ಮನೆ, ಬೆಳೆಹಾನಿ, ವಿದ್ಯುತ್, ಹಾಗೆಯೇ ಸರ್ಕಾರಿ ಕಟ್ಟಡಗಳು ನಷ್ಟ ಸಂಬಂಧಿ ಸಿದಂತೆ ಈಗಾಗಲೇ 326 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜು ಮಾಡಲಾಗಿದೆ. ಪರಿಹಾರ ಸಂಬಂಧ ಅಗತ್ಯ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ, ಸೇತುವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಳೆಯಿಂದ ಹಾನಿಯಾಗಿರುವುದನ್ನು ಸರಿಪಡಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಸರ್ಕಾರಕ್ಕೆ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಅವರು ಸೂಚಿಸಿದರು. ಜೂನ್, ಜುಲೆ„ ಎರಡು ತಿಂಗಳು ಕೃಷಿ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ತೆರಳಿ ರೈತರಿಗೆ ಸಲಹೆ, ಮಾರ್ಗದರ್ಶನ ಹಾಗೂ ನೆರವು ನೀಡಬೇಕು. ಈ ಎರಡು ತಿಂಗಳುಗಳನ್ನು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.