Advertisement
ಗರಿಷ್ಠ ಪರಿಹಾರ ಒದಗಿಸಿಸಂತ್ರಸ್ತರಿಗೆ ಮಾನವೀಯ ನೆಲೆಯಲ್ಲಿ ಗರಿಷ್ಠ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾಹಿತಿ ನೀಡಿ, ಜಿಲ್ಲೆಯಲ್ಲಿ 568 ಮನೆಗಳು ಹಾನಿಗೊಳಗಾಗಿವೆ. 303 ಮನೆಗಳಿಗೆ 32.65 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ; ಉಳಿದವುಗಳಿಗೆ ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು. 3 ಸಾವು
ಮಳೆಯಿಂದಾಗಿ ಜಿಲ್ಲೆಯಲ್ಲಿ ಮೂವರು ಪ್ರಾಣ ಕಳೆದು ಕೊಂಡಿದ್ದಾರೆ. ಓರ್ವನ ಕುಟುಂಬಕ್ಕೆ 4 ಲ.ರೂ. ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಉಳಿದವರಿಗೆ ವಿತರಣೆ ನಡೆಯಲಿದೆ. ಮತ್ತೂಬ್ಬರ ಮರಣ ಪ್ರಮಾಣ ಪತ್ರ ಸಿಕ್ಕಿದ ಕೂಡಲೆ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದರು.
Related Articles
ರಕ್ಷಣಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ ಎಸ್‌ಪಿ ನಿಶಾ ಜೇಮ್ಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಯ ಪೊಲೀಸ್ ಸಿಬಂದಿಗೆ ರಕ್ಷಣಾ ಕಾರ್ಯದ ಬಗ್ಗೆ ತರಬೇತಿ ನೀಡಿದೆ. ಇಲಾಖೆಯು ಎರಡು ತಂಡಗಳನ್ನು ನೇಮಿಸಿ ಅಗತ್ಯ ಬಿದ್ದಲ್ಲಿ ಈ ತಂಡಗಳನ್ನು ಕಳುಹಿಸಿ ಕೊಡಲು ಸನ್ನದ್ದವಾಗಿದೆ. ರಕ್ಷಣಾ ಕಾರ್ಯಕ್ಕೆ ಬೇಕಾದ ಎಲ್ಲ ಸಲಕರಣೆಗಳನ್ನು ಸಂಗ್ರಹ ಮಾಡಲಾಗಿದ್ದು, ಅಗತ್ಯವಿದ್ದೆಡೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
Advertisement