Advertisement

ಕ್ರಿಯೆಗೆ ಪ್ರತಿಕ್ರಿಯೆ ಒಳ್ಳೆಯದಲ್ಲ: ಪರಮೇಶ್ವರ್‌

11:20 PM May 13, 2019 | Team Udayavani |

ಬೆಂಗಳೂರು: ಜೆಡಿಎಸ್‌ ಅಧ್ಯಕ್ಷ ವಿಶ್ವನಾಥ್‌ ಹಾಗೂ ಸಿದ್ದರಾಮಯ್ಯ ನಡುವೆ ವಯಕ್ತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ, ರಾಜಕೀಯವಾಗಿ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರ‌ ಬಗ್ಗೆ ವಿಶ್ವನಾಥ್‌ ಮಾತನಾಡಿರುವುದು ಸರಿಯಲ್ಲ. ಕಾಂಗ್ರೆಸ್‌ನಿಂದಲೂ ಈ ರೀತಿಯ ಹೇಳಿಕೆಗಳು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ. ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

Advertisement

ತಮ್ಮ ಕಚೇರಿಯಲ್ಲಿ ಬೆಂಗಳೂರಿನ ಮೈತ್ರಿ ಪಕ್ಷಗಳ ಶಾಸಕರು ಹಾಗೂ ಸಂಸದರ ಜತೆ ಉಪಾಹಾರ ಕೂಟ ಏರ್ಪಡಿಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು. ರಾಜ್ಯ ರಾಜಕೀಯ ಬೆಳವಣಿಗೆಯಿಂದ ಬೆಂಗಳೂರಿನ ಅಭಿವೃದ್ಧಿ ಮೇಲೂ ಪರಿಣಾಮ ಬೀರುತ್ತಿರುವುದರಿಂದ ಮೈತ್ರಿ ಪಕ್ಷಗಳ ಶಾಸಕರು ಹೊಂದಾಣಿಕೆಯಿಂದ ಕೆಲಸ ಮಾಡಿಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ ಬಿಬಿಎಂಪಿ ಬಜೆಟ್‌ ಅನುಮೋದನೆ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ಮೈತ್ರಿ ಸರ್ಕಾರ ಆರೋಗ್ಯಕರವಾಗಿ ಮುಂದುವರೆಯಬೇಕಾದರೆ ಕ್ರಿಯೆಗೆ ಪ್ರತಿಕ್ರಿಯೆ ನೀಡುವುದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ವರಿಷ್ಠ ದೇವೇಗೌಡ ಅವರು ಇದನ್ನು ಗಮನಿಸಬೇಕು. ಮೈತ್ರಿ ಸರ್ಕಾರ ಇನ್ನೂ ನಾಲ್ಕು ವರ್ಷ ಕೆಲಸ ಮಾಡಬೇಕು. ಮೈತ್ರಿ ಮುಂದುವರೆಯಬೇಕಾದರೆ ಇಂತಹ ಹೇಳಿಕೆಗಳು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.

ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರಿಂದೇನು ನಾವು ಸಮ್ಮಿಶ್ರ ಸರ್ಕಾರ ಮಾಡಿಲ್ಲ. ಜನತಾದಳದ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ನಮ್ಮ ರಾಷ್ಟ್ರೀಯ ನಾಯಕರಿಂದ ಮೈತ್ರಿಯಾಗಿದೆ. ನಾಯಕರ ವಯಕ್ತಿಕ ಭಿನ್ನಾಭಿಪ್ರಾಯಕ್ಕೆ ಇಲ್ಲಿ ಅವಕಾಶವಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮತ್ತು ವಿಶ್ವನಾಥ್‌ ನಡುವೆ ನಡೆಯುತ್ತಿರುವ ಟ್ವಿಟ್‌ ಸಮರಕ್ಕೂ ಪರಮೇಶ್ವರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next