Advertisement

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

02:24 AM Jan 01, 2025 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದ ಅಕ್ಷರ ದಾಸೋಹ ನೌಕರರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರಕಾರ 60 ವರ್ಷ ವಯೋಮಿತಿ ಪೂರೈಸಿದವರಿಗೆ ಇಡುಗಂಟು ನೀಡುವ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ ಕಾರ್ಯಕ್ರಮದಡಿ (ಮಧ್ಯಾಹ್ನ ಉಪಾಹಾರ ಯೋಜನೆ ) ಆಯ್ಕೆಗೊಂಡ 60 ವರ್ಷಗಳ ವಯೋಮಿತಿಯನ್ನು ಪೂರೈಸಿದವರಿಗೆ ಒಮ್ಮೆ ಇಡುಗಂಟು ನೀಡುವ ಘೋಷಣೆಯನ್ನು ರಾಜ್ಯ ಸರಕಾರ ಮಾಡಿದೆ.

Advertisement

ಸರಕಾರದ ಆದೇಶದಂತೆ 2022 ಮಾ. 31ರಂದು ಅಥವಾ ನಂತರ ಅಡುಗೆ ಕೆಲಸದಿಂದ ಬಿಡುಗಡೆ ಹೊಂದಿರುವ ಅಥವಾ ಕೆಲಸದಿಂದ ಬಿಡುಗಡೆ ಹೊಂದುವ ಅಡುಗೆ ಸಿಬಂದಿ ಅಂತಿಮವಾಗಿ ಒಂದು ಬಾರಿಯ ಇಡುಗಂಟು ಸೌಲಭ್ಯ ಸಿಗಲಿದೆ. ಅರ್ಹ ಅಡುಗೆ ಸಿಬಂದಿಗೆ ಇಡುಗಂಟು ನೀಡುವ ಸಂದರ್ಭದಲ್ಲಿ ಸುತ್ತೋಲೆಯಲ್ಲಿ ನಮೂದಿಸಿರುವ ಎಲ್ಲ ಷರತ್ತುಗಳನ್ನು ಜಿಲ್ಲಾ ಮತ್ತು ತಾಲೂಕು ಹಂತಗಳಲ್ಲಿನ ಅನುಷ್ಠಾನಾಧಿಕಾರಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು.

ಇಡುಗಂಟು ನೀಡಬೇಕಾಗಿರುವ ಅರ್ಹ ಪ್ರಕರಣಗಳಲ್ಲಿ ಅಡುಗೆ ಸಿಬಂದಿ ಅಥವಾ ಅರ್ಹ ಕಾನೂನುಬದ್ಧ ಅವಲಂಬಿತರು ಬೇಡಿಕೆ ಪ್ರಸ್ತಾವನೆಯನ್ನು ಸೇವೆ ಸಲ್ಲಿಸಿರುವ ಶಾಲೆಯ ಮುಖ್ಯ ಶಿಕ್ಷಕರಿಗೆ ಸಲ್ಲಿಸುವುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ವಿ. ತ್ರಿಲೋಕ ಚಂದ್ರ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಯಾರಿಗೆ ಎಷ್ಟು?
5 ವರ್ಷಕ್ಕೂ ಮೇಲ್ಪಟ್ಟು ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದ್ದಲ್ಲಿ 30,000 ರೂ., ಹಾಗೂ 15 ವರ್ಷ ಹಾಗೂ ಅದಕ್ಕೂ ಹೆಚ್ಚು ಸೇವೆ ಸಲ್ಲಿಸಿದ್ದಲ್ಲಿ 40,000 ರೂ., ಇಡಿಗಂಟು ನೀಡಲು ಸರಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next