Advertisement

ಹಕ್ಕು-ಕರ್ತವ್ಯ ಪಾಲನೆ ಜವಾಬ್ದಾರಿ

01:05 PM Feb 21, 2018 | Team Udayavani |

ಬೀದರ: ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿ ಕೊಳ್ಳುವುದು ಮತ್ತು ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌.ರಾಘವೇಂದ್ರ ಅವರು ಹೇಳಿದರು.

Advertisement

ಮೈಲೂರಿನ ಬಾಲಕಿಯರ ಬಾಲ ಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಅರಿವು ಹಾಗೂ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ಜೀವನ ನಿರ್ವಹಣೆಗೆ ಸಂವಿಧಾನದಲ್ಲಿ ದೇಶದ ಎಲ್ಲಾ ನಾಗರಿಕರಿಗೂ ಮೂಲಭುತ ಹಕ್ಕುಗಳನ್ನು ನೀಡಲಾಗಿದೆ. ಇದರ ಉಪಯೋಗ ಎಲ್ಲರಿಗೂ ದೊರೆಯಬೇಕು. ಇವುಗಳನ್ನು ಉಲ್ಲಂಘಿ ಸುವುದು ಅಪರಾಧವಾಗುತ್ತದೆ ಎಂದರು.

ಬಾಲ ನ್ಯಾಯ ಮಂಡಳಿ ಅಧ್ಯಕ್ಷರು, 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ-2 ಉಜ್ವಲಾ
ವೀರಣ್ಣ ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ಕಾನೂನಿನ ಬಗ್ಗೆ ಮಾಹಿತಿ ಪಡೆಯಬೇಕು. ಪರೀಕ್ಷೆಗೂ
ಮುನ್ನ ಸಾಕಷ್ಟು ಪೂರ್ವಸಿದ್ಧತೆಗಳನ್ನು ಮಾಡಿಕೊಂಡಲ್ಲಿ ಹೆಚ್ಚು ಅಂಕಗಳನ್ನುಗಳಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ
ಕಿವಿಮಾತು ಹೇಳಿದರು. 

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಐ.ಎಸ್‌. ಪಾಂಚಾಳ, ಬಾಲ ನ್ಯಾಯ ಮಂಡಳಿ ಸದಸ್ಯರು ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕವಿತಾ ಹುಷಾರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ
ಆಡಳಿತಾಧಿಕಾರಿ ಶಂಕ್ರೆಪ್ಪಾ ಜನಕಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next