Advertisement

ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್‌ ಓಪನ್‌

07:24 AM Jun 07, 2020 | Lakshmi GovindaRaj |

ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

Advertisement

ಶನಿವಾರ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ  ನಿವಾರಣೆ ಕುರಿತು ಪ್ರವಾಸೋದ್ಯಮ   ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್‌ಗ‌ಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪನಿಗಳ  ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಈ ಸಭೆಯಲ್ಲಿ ಭಾಗವಹಿಸಿದ್ದ ಬಸ್‌ ಮಾಲೀಕರ ಸಂಘ, ಹೋಟೆಲ್‌ ಮಾಲೀಕರ ಸಂಘ ಹಾಗೂ ಟ್ಯಾಕ್ಸಿ ಮಾಲೀಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು. ಅವರ ಬೇಡಿಕೆಗಳನ್ನು ಪರಿಶೀಲಿಸಿ,  ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್‌ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ  ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ  ಪ್ರವಾಸೋದ್ಯಮ ಅಭಿವೃದಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next