ಧಾರವಾಡ: ರಾಜ್ಯದಲ್ಲಿ ಇದೀಗ ಪೌರ ಕಾರ್ಮಿಕರಿಗೆ ನೀಡುತ್ತಿರುವ ಉಪಾಹಾರದ ವೆಚ್ಚವನ್ನು 20 ರೂ.ದಿಂದ 50 ರೂ.ಗೆ ಏರಿಸಲಾಗುವುದು. ಇದಲ್ಲದೆ ಪ್ರತಿ ವಾರ್ಡ್ಗಳಲ್ಲಿ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ (ಕೋಟೆ) ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪೌರ ಕಾರ್ಮಿಕರನ್ನು ಕಾಯಂ ನೌಕರರೆಂದು ಪರಿಗಣಿಸುವಂತೆ ಸಿಎಂಗೆ ಶೀಘ್ರ ಮನವಿ ಮಾಡಲಾಗುವುದು ಎಂದರು. ಸಫಾಯಿ ಕರ್ಮಚಾರಿಗಳ ಹಿತರಕ್ಷಣೆಗಾಗಿ ಜಾರಿಗೊಳಿಸಿರುವ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ ರಾಜ್ಯದಲ್ಲಿ ಸರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಸಾಕಷ್ಟು ಜನರು ಈ ಕಾರ್ಯವನ್ನು ಇನ್ನೂ ನಡೆಸಿದ್ದಾರೆ. ರಾಜ್ಯದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮಾಹಿತಿ ಪ್ರಕಾರ 5080 ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಇದ್ದಾರೆ. ಈ ಕಾರ್ಯದಿಂದ ರಾಜ್ಯದಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಹೀಗಾಗಿ ನಿಷೇಧಿಸಿದ್ದು, ಅದನ್ನು ಸರಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ಜಿಲ್ಲಾ ಧಿಕಾರಿ, ಜಿಪಂ ಸಿಇಒ ಹಾಗೂ ಗ್ರಾಮಗಳ ಮಟ್ಟದಲ್ಲಿ ಪಿಡಿಒಗಳು ಶ್ರಮಿಸಬೇಕು ಎಂದರು.
ಹು-ಧಾ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಸಿಗುತ್ತಿಲ್ಲ ಎಂದು ಸಾಕಷ್ಟು ದೂರುಗಳು ಬಂದಿದೆ. ಇದೇ ಕಾರಣಕ್ಕೆಬುಧವಾರ ಬೆಳಿಗ್ಗೆ ಕೆಲ ಕಡೆಗಳಲ್ಲಿ ವೀಕ್ಷಿಸಿದಾಗ, ಪೌರ ಕಾರ್ಮಿಕರು ಮಾಸ್ಕ್, ಬೂಟು ಹಾಗೂ ಕೈಗವಸು ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದರು. ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ದಂಡ ವಿ ಧಿಸಿ ವರದಿ ನೀಡಲು ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಪ್ರಗತಿ ಪರಿಶೀಲನಾ ಸಭೆ : ಇದಕ್ಕೂ ಮುನ್ನ ನಗರದ ಡಿಸಿ ಕಚೇರಿಯಲ್ಲಿ ಮ್ಯಾನ್ಯುವೆಲ್ ಸ್ಕಾವೆಂಜಿಂಗ್ ನಿಷೇಧ ಕಾಯ್ದೆ 2013 ಅನುಷ್ಠಾನ ಕುರಿತು ತರಬೇತಿ ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಯೋಗದ ಅಧ್ಯಕ್ಷರು, ಪೌರಕಾರ್ಮಿಕರಿಗೆ ಸೂಕ್ತ ಸ್ಥಾನಮಾನ ನೀಡುವ ಜತೆಗೆ ಮಾನವೀಯತೆಯಿಂದ ನೋಡಬೇಕು. ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕೆಂದು ಸೂಚಿಸಿದರು.
ಪೌರಕಾರ್ಮಿಕರ ಬಗ್ಗೆ ಅ ಧಿಕಾರಿಗಳು ಅಸಡ್ಡೆ ತೋರಬಾರದು. ಕಾಳಜಿಯಿಂದ ನೋಡಿಕೊಳ್ಳಬೇಕು. ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ 2013 ಜಾರಿಗೆ ಬಂದಿದೆ. ರಾಜ್ಯದಲ್ಲಿ ಪೌರಕಾರ್ಮಿಕರು ಯಾವುದೇ ಸುರಕ್ಷತಾ ಕ್ರಮ ಅನುಸರಿಸದೆ ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಮಾಡುತ್ತಿರುವುದು ವಿಪರ್ಯಾಸ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಪೌರಕಾರ್ಮಿಕರಿಗೆ 42 ಸುರಕ್ಷತಾ ಸಾಮಗ್ರಿ ನೀಡಿ, ತರಬೇತಿ ಪಡೆದ ನುರಿತ ಕಾರ್ಮಿಕರಿಂದ ಮಾತ್ರ ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ನಡೆಸಲು ಅವಕಾಶವಿರುತ್ತದೆ. ಒತ್ತಾಯ ಪೂರ್ವಕವಾಗಿ ಅಥವಾ ದಬ್ಟಾಳಿಕೆಯಿಂದ ಸ್ಕ್ಯಾವೆಂಜಿಂಗ್ ನಡೆಸಲು ಒತ್ತಾಯ ಹೇರುವಂತಿಲ್ಲ. ಅಂತಹ ಪ್ರಕರಣಗಳು ಬೆಳಕಿಗೆ ಬಂದರೆ ಅ ಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಪೋಲಿಸ್ ಅ ಧಿಕಾರಿಗಳಿಗೆ ಸೂಚಿಸಿದ ಅಧ್ಯಕ್ಷರು, ಪೌರಕಾರ್ಮಿಕರಿಗೆ ಕಾನೂನು ಪ್ರಕಾರ ವಿಮೆ, ವೈದ್ಯಕೀಯ ಸೌಲಭ್ಯ ನೀಡಬೇಕು ಎಂದರು.
ಆಯೋಗದ ಕಾರ್ಯದರ್ಶಿ ರಮಾ ಅವರು, ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ 2013ರ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿ ಮಾತನಾಡಿ, ಕಾಯ್ದೆ ಉಲ್ಲಂಘನೆಯಾಗದಂತೆ ಎಲ್ಲ ಅ ಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪ್ರಕರಣ ಬೆಳಕಿಗೆ ಬಂದ ತಕ್ಷಣ ಅಂತಹ ಅ ಧಿಕಾರಿಗಳ ವಿರುದ್ಧ ದಂಡ ಹಾಕಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಶಾಸಕ ಪ್ರಸಾದ ಅಬ್ಬಯ್ಯ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿ ಕಾರಿ ಡಾ|ಗೋಪಾಲಕೃಷ್ಣ ಬಿ., ಉಪ ಪೋಲಿಸ್ ಆಯುಕ್ತ ಅರ್.ಬಿ.ಬಸರಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಸೇರಿದಂತೆ ಹಲವರು ಇದ್ದರು.