Advertisement

ಅಟಲ್‌ ಸಾರಿಗೆ ಪುನಶ್ಚೇತನಗೊಳಿಸಿ

02:35 PM Aug 18, 2018 | Team Udayavani |

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಅನುಕೂಲಕ್ಕಾಗಿ ಆರಂಭಿಸಿದ್ದ ಅಟಲ್‌ ಸಾರಿಗೆ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

Advertisement

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನ ಬಡವರ, ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅಟಲ್‌ ಸಾರಿಗೆ ವ್ಯವಸ್ಥೆ ಈಗ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದನ್ನು ಪುನಶ್ಚೇತನಗೊಳಿಸುವ ಮೂಲಕ ರಾಜ್ಯ ಸರ್ಕಾರ ಅಜಾತಶತ್ರು ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಬೇಕು ಎಂದರು.

ಕೊಳಗೇರಿ ನಿವಾಸಿಗಳು, ಕೂಲಿಕಾರ್ಮಿಕರು ಶೇ.50ರಷ್ಟು ರಿಯಾಯ್ತಿ ದರದಲ್ಲಿ  ಪ್ರಯಾಣಿಸಲು ಅನುಕೂಲವಾಗುವಂತೆ ಅಟಲ್‌ ಸಾರಿಗೆ ವ್ಯವಸ್ಥೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಆರಂಭಿಸಿದ್ದೆವು. ಬಿಎಂಟಿಸಿಯಿಂದ 25 ಬಸ್‌ಗಳನ್ನು ನೀಡಿದ್ದೆವು. ನಂತರ ರಾಜ್ಯ ಸರ್ಕಾರ ನಿರ್ಲಕ್ಷ್ಯದಿಂದ ಬಸ್‌ಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next