Advertisement

ಅಧಿಕ ಭಾರದ ವಾಹನ ಸಂಚಾರ ನಿರ್ಬಂಧಿಸಿ

06:45 PM May 22, 2022 | Team Udayavani |

ಚಿಕ್ಕಮಗಳೂರು: 15 ಮೆಟ್ರಿಕ್‌ ಟನ್‌ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿರ್ಬಂಧಿಸುವಂತೆ ರಾಜ್ಯ ಉಚ್ಚ ನ್ಯಾಯಾಲಯ ಮಾಡಿರುವ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯ ಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

Advertisement

ಶುಕ್ರವಾರ ಈ ಸಂಬಂಧ ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಅವರಿಗೆ ಈ ಕುರಿತು ಮನವಿ ಸಲ್ಲಿಸಿದರು. 15 ಮೆಟ್ರಿಕ್‌ ಟನ್‌ಗಿಂತ ಅಧಿಕ ಭಾರ ಹೊತ್ತು ಸಂಚರಿಸುವ ವಾಹನಗಳಿಂದಾಗಿ ಜಿಲ್ಲೆಯ ಅದರಲ್ಲೂ ವಿಶೇಷವಾಗಿ ಮಲೆನಾಡಿನ ರಸ್ತೆಗಳು ಹಾಳಾಗುತ್ತಿವೆ. ಗುಂಡಿ- ಗೊಟರುಗಳು ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ಆರೋಪಿಸಿದರು.

ತಮ್ಮ ಸಂಘಟನೆಯ ಮನವಿಗೆ ಸ್ಪಂದಿಸಿರುವ ರಾಜ್ಯ ಉಚ್ಚ ನ್ಯಾಯಾಲಯ 15 ಮೆಟ್ರಿಕ್‌ ಟನ್‌ ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಸೂಚಿಸಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ದೂರಿದರು.

ಇದರಿಂದ ಅಧಿಕ ಭಾರ ಹೊತ್ತ ನೂರಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ನಿರ್ಬಂಧ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸುವಂತೆ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next