Advertisement
ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿತ್ತು. ಈಗ ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಹಂಪಿ ಸೇರಿದಂತೆ ದೇಶದ ರಾಷ್ಟ್ರೀಯ ಸ್ಮಾರಕಗಳ ವೀಕ್ಷಣೆಗೆ ನಿರ್ಬಂಧ ವಿಧಿ ಸಿ ಆದೇಶಿಸಿದೆ. ಹೀಗಾಗಿ ಹಂಪಿಯಲ್ಲಿ ಸದಾ ಪ್ರವಾಸಿಗರಿಂದ ಲವಲವಿಕೆಯಾಗಿರುತ್ತಿದ್ದ ಸ್ಮಾರಕಗಳು ಈಗ ಪ್ರವಾಸಿಗರಿಲ್ಲದೇ ಖಾಲಿ ಖಾಲಿಯಾಗಿವೆ.
Related Articles
Advertisement
ಹಂಪಿ ಶ್ರೀವಿರೂಪಾಕ್ಷೇಶ್ವರ ದೇವಾಲಯದ ರಥಬೀದಿಯಲ್ಲೂ ಜನರಿಲ್ಲದಂತಾಗಿದೆ. ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಕೆಮುಖವಾಗಿದೆ. ದೇಗುಲದಲ್ಲಿ ಪೂಜೆಗೆ ಅವಕಾಶ ಇದ್ದರೂ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಶ್ರೀವಿರೂಪಾಕ್ಷೇಶ್ವರ ದೇಗುಲದಲ್ಲಿ ಹಿಂದೂಧಾರ್ಮಿಕ ದತ್ತಿ ಇಲಾಖೆಯಿಂದ ನಿತ್ಯ ಪೂಜೆ ನಡೆಯಲಿದೆ. ದೇಗುಲದಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿ ಧಿಸಿಲ್ಲ. ಹೀಗಾಗಿ ಭಕ್ತರು ಆಗಮಿಸಬಹುದು. ಜತೆಗೆ ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ಹೇಳುತ್ತಾರೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು.
ವೀಕೆಂಡ್‌ಗೆ ಬರುತ್ತಿದ್ದ ಪ್ರವಾಸಿಗರು: ಹಂಪಿಯಲ್ಲಿ ಲಾಕ್‌ಡೌನ್ ಬಳಿಕ ವೀಕೆಂಡ್‌ನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿತ್ತು. ಅದರಲ್ಲೂ ಸ್ಥಳೀಯ ಪೊಲೀಸರು ಪ್ರವಾಸಿಗರಿಗೆ ಮಾಸ್ಕ್ ಧರಿಸಲು ತಿಳಿ ಹೇಳುತ್ತಿದ್ದರೂ ನಿಯಮ ಪಾಲನೆಯಾಗುತ್ತಿರಲಿಲ್ಲ. ಈಗ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿರುವುದರಿಂದ ಪ್ರಮುಖ ಪ್ರವಾಸಿ ತಾಣವಾಗಿರುವ ಹಂಪಿ, ಹೊಸಪೇಟೆ, ತುಂಗಭದ್ರಾ ಪ್ರದೇಶ, ದರೋಜಿ ಕರಡಿಧಾಮ ಹಾಗೂ ಅಟಲ್ ಬಿಹಾರಿ ಝೂಲಾಜಿಕಲ್ ಪಾರ್ಕ್‌ನಲ್ಲೂ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ.
ಬ್ಯಾಟರಿ ಚಾಲಿತ ವಾಹನಗಳ ಓಡಾಟ ಇಲ್ಲ: ಹಂಪಿ ಗೆಜ್ಜಲಮಂಟಪದಿಂದ ವಿಜಯ ವಿಠ್ಠಲ ದೇಗುಲದವರೆಗೆ ಹಂಪಿ ಅಭಿವೃದ್ಧಿ ಪ್ರಾ ಧಿಕಾರದಡಿಯಲ್ಲಿ ನಡೆಯುತ್ತಿದ್ದ ಬ್ಯಾಟರಿ ಚಾಲಿತ ವಾಹನಗಳ ಓಡಾಟವನ್ನೂ ನಿಲ್ಲಿಸಲಾಗಿದೆ. ಹಂಪಿಯಲ್ಲಿ ಸ್ಮಾರಕಗಳ ವೀಕ್ಷಣೆಗೆ ಭಾರತೀಯ ಪುರಾತತ್ವ ಇಲಾಖೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಪ್ರಾಧಿ ಕಾರ ಈ ಕ್ರಮಕೈಗೊಂಡಿದೆ.