Advertisement

ಹೊರ ಜಿಲ್ಲೆಗಳ ಜನರ ಪ್ರವೇಶಕ್ಕೆ ನಿರ್ಬಂಧ

04:02 PM Apr 09, 2020 | Suhan S |

ಸಕಲೇಶಪುರ: ತಾಲೂಕಿಗೆ ಹೊಂದಿ ಕೊಂಡಿರುವ ಜಿಲ್ಲೆಗಳಿಂದ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಗಿರೀಶ್‌ ನಂದನ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಮಿನಿ ವಿಧಾನಸೌಧದಲ್ಲಿ ನಡೆದ ಕೋವಿಡ್ 19 ನಿಯಂತ್ರಣದ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಕಲೇಶಪುರ ತಾಲೂಕು ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹೊಂದಿಕೊಂಡಿದೆ. ಆ ಭಾಗದಲ್ಲಿ ಅಧಿಕಾರಿಗಳು ಕಣ್ಗಾವಲಿರಿಸಿದ್ದಾರೆ. ಅನುಮತಿಯಿಲ್ಲದೇ ಆ ಜಿಲ್ಲೆಗಳಿಂದ ಹಾಸನ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದರು.

ಈಗಾಗಲೇ ಜಿಲ್ಲೆಯ ಹೊರ ಭಾಗಗಳಿಂದ ತಾಲೂಕಿಗೆ ಪ್ರವೇಶಿಸುವ 5 ಮಾರ್ಗಗಳಲ್ಲಿ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇನ್ನುಳಿದ 4 ದ್ವಾರಗಳಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು, ಆಹಾರ, ಔಷಧಿ ಸಾಗಣೆ, ಆ್ಯಂಬುಲೆನ್ಸ್‌ಗಳಿಗೆ ಮಾತ್ರ ಓಡಾಡಲು ಅವಕಾಶ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೂ ವಾಹನಗಳಲ್ಲಿ ತರಕಾರಿಗಳ ಸಾಗಣೆಗೆ ಅವಕಾಶ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನ ಪಟ್ಟಣದತ್ತ ಅಗತ್ಯ ವಸ್ತುಗಳನ್ನು ಖರೀದಿಸಲು ಬರಬಾರದು ಹಾಗೂ ಪೆಟ್ರೋಲ್‌ ಬಂಕ್‌ಗಳಲ್ಲಿ ಖಾಸಗಿ ವಾಹನಗಳಿಗೆ ಪೆಟ್ರೋಲ್‌ ಹಾಕಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಹಶೀಲ್ದಾರ್‌ ಮಂಜುನಾಥ್‌, ತಾಪಂ ಇಒ ಮಹರೀಶ್‌ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next