Advertisement

ಬಂಡೀಪುರ, ಬಿ.ರಂ.ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

01:51 PM Dec 24, 2020 | Suhan S |

ಚಾಮರಾಜನಗರ: ಹೊಸವರ್ಷಾಚರಣೆಗೆ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ವನ್ಯಜೀವಿ ತಾಣಗಳಾದ ಬಂಡೀಪುರ ಹಾಗೂ ಬಿಳಿಗಿರಿರಂಗನಬೆಟ್ಟದಲ್ಲಿ ವಾಸ್ತವ್ಯ ಹೂಡಬೇಕೆಂದಿದ್ದರೆ ನಿಲ್ಲಿ..! ಕೋವಿಡ್‌ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಾಸ್ತವ್ಯಕ್ಕೆ ನಿರ್ಬಂಧ ಹೇರಿದೆ.

Advertisement

ಪ್ರಸಿದ್ಧ ಪ್ರವಾಸಿ ತಾಣಗಳಾದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಹಾಗೂ ಬಿಳಿಗಿರಿರಂಗನಾಥ ಹುಲಿ ರಕ್ಷಿತಾರಣ್ಯಗಳಲ್ಲಿ ಹೊಸ ವರ್ಷದ ಮುನ್ನಾದಿನ ಪ್ರತಿ ವರ್ಷ ವಸತಿ ಗೃಹಗಳು ಭರ್ತಿಯಾಗಿರುತ್ತಿದ್ದವು. 2 ತಿಂಗಳ ಮುಂಚೆಯೇ ಅರಣ್ಯ ಇಲಾಖೆಯ ಕಾಟೇಜ್‌ಗಳು ಬೆಂಗಳೂರು, ಮೈಸೂರಿನ ಅರನದ ಮೂಲಕ ಬುಕ್‌ ಆಗಿರುತ್ತಿದ್ದವು.

ಆದರೆ ಕೋವಿಡ್‌ ಹಿನ್ನೆಲೆ ಈ ಬಾರಿ ಅರಣ್ಯ ಇಲಾಖೆ, ತನ್ನ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ತಡೆಯೊಡ್ಡಿದೆ. ಡಿ.31 ಹಾಗೂ ಜ.1ರಂದು ಈ ಎರಡೂ ಅರಣ್ಯಗಳ, ಅರಣ್ಯ ಇಲಾಖೆಯ ವಸತಿ ಗೃಹಗಳಲ್ಲಿ ಉಳಿದುಕೊಳ್ಳಲು ಪ್ರವಾಸಿಗರಿಗೆ ಅವಕಾಶವಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ಆದರೆ, ಸಫಾರಿ ವ್ಯವಸ್ಥೆ ಎಂದಿನಂತೆ ಇರುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಡಳಿತ ಸೂಚನೆ: ಹೆಚ್ಚಿನ ಜನರು ಸೇರುವ ಕೂಟಗಳನ್ನು, ಸಾರ್ವಜನಿಕ ಸ್ಥಳಗಳಲ್ಲಿ, ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವಂತಹ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಭೌತಿಕ ಅಂತರ ಕಾಯ್ದುಕೊಳ್ಳಲು ಶೇ.50 ರಷ್ಟು ಜನರಿಗೆ ಮಾತ್ರ ಚರ್ಚ್ಗಳಿಗೆ ಪ್ರವೇಶ ಕಲ್ಪಿಸಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮವಹಿಸಬೇಕು. ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.

Advertisement

ಡಿ.30ರಿಂದಜನವರಿ2ರವರೆಗೆಕ್ಲಬ್‌,ಪಬ್‌,ರೆಸ್ಟೋರೆಂಟ್‌, ರೆಸಾರ್ಟ್‌, ಡಾಬಾ, ಹೋಟೆಲ್‌, ಲಾಡ್ಜ್ ಹಾಗೂ ಪಾರ್ಟಿಹಾಲ್‌ಗ‌ಳು ಇತರೆ ಸ್ಥಳ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿ.ಜೆ ಡ್ಯಾನ್ಸ್‌ , ವಿಶೇಷ ಪಾರ್ಟಿ ಇತ್ಯಾದಿ ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಈ ಅವಧಿಯಲ್ಲಿ ಕ್ಲಬ್‌, ಪಬ್‌, ರೆಸ್ಟೋರೆಂಟ್‌, ರೆಸಾರ್ಟ್‌, ಡಾಬಾ, ಹೋಟೆಲ್‌, ಲಾಡ್ಜ್ಗಳನ್ನು ತೆರೆಯಬಹುದಾಗಿದ್ದು ಗ್ರಾಹಕರನ್ನು ಶೇ. 50ಕ್ಕೆ ಮಿತಿಗೊಳಿಸಲಾಗಿದೆ. ಹೊಸ ವರ್ಷಾಚರಣೆ ಸಂಬಂಧ ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರೇಕ್ಷಣೀಯ ಸ್ಥಳ, ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ.

65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷ ದೊಳಗಿನ ಮಕ್ಕಳು ಮನೆಯಲ್ಲೇ ಇರಬೇಕು. ಸಾರ್ವಜನಿಕ ಸ್ಥಳಗಲ್ಲಿ ಮಾಸ್ಕ್ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು, ಥರ್ಮಲ್‌ ಸ್ಕ್ಯಾನಿಂಗ್‌ ಹಾಗೂ ಸ್ಯಾನಿಟೈಸರ್‌ ವ್ಯವಸ್ಥೆಯನ್ನುಕಡ್ಡಾಯವಾಗಿ ಇರಿಸಬೇಕೆಂದು ಸೂಚಿಸಲಾಗಿದೆ.

 

-ಕೆ.ಎಸ್‌.ಬನಶಂಕರ ಆರಾಧ್ಯ

Advertisement

Udayavani is now on Telegram. Click here to join our channel and stay updated with the latest news.

Next