Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ತಂಬಾಕು ನಿಯಂತ್ರಣ ಕೋಶದ ಎರಡನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ತಂಬಾಕು ಉತ್ಪನ್ನಗಳ ಉತ್ಪಾದನೆ, ಶೇಖರಣೆ, ವಿತರಣೆ ಹಾಗೂ ಮಾರಾಟ ನಿಯಂತ್ರಿಸುವುದೇ ಮುಖ್ಯ ಉದ್ದೇಶ ಎಂದರು.
Related Articles
Advertisement
ಡಿಡಿಪಿಐಗೆ ಸೂಚನೆ: ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಲ್ಲಿನ 221ರಲ್ಲಿ 52 ಶೈಕ್ಷಣಿಕ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾತ್ರ ತಂಬಾಕು ಮುಕ್ತ ಸಂಸ್ಥೆ ಎಂದು ಘೋಷಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಘೋಷಿಸುವ ಪ್ರಕ್ರಿಯೆ ಮೇ 25ರೊಳಗೆ ಮುಕ್ತಾಯಗೊಳ್ಳಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಎಂದು ಡಿಡಿಪಿಐ ಅವರಿಗೆ ಸೂಚಿಸಿದರು.
ತನಿಖಾದಳಕ್ಕೆ ಸೂಚನೆ: ಜಿಲ್ಲೆಯಲ್ಲಿ ಕೋಟಾ³-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರತಿ 3 ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ಹಾಗು ಪರಿಶೀಲನೆ ನಡೆಸುವಂತೆ ಸೂಚಿಸಿದರು.
ತಹಶೀಲ್ದಾರ್‌ರಿಗೆ ಸೂಚನೆ: ಶೈಕ್ಷಣಿಕ ಸಂಸ್ಥೆಗಳು 100 ಅಡಿ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ವಿರುದ್ಧ ತನಿಖಾ ದಳದ ಸದಸ್ಯರು ದಾಳಿ ಮಾಡಿ, ತಂಬಾಕು ಉತ್ಪನ್ನ ಮಾರಾಟ ನಿಲ್ಲಿಸಬೇಕು. ತಾಲೂಕು ಮಟ್ಟದ ದಾಳಿಗೆ ದಿನಾಂಕ ನಿಗದಿ ಮಾಡಿಕೊಂಡು ತಹಶೀಲ್ದಾರ್‌ರ ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಅಬಕಾರಿ ಇಲಾಖೆಗೆ ಸೂಚನೆ: ಅಬಕಾರಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಮದ್ಯದ ಅಂಗಡಿ, ಬಾರಗಳಲ್ಲಿ ಸೆಕ್ಷನ್ 4ರ ನಾಮಫಲಕ ಅಳವಡಿಸಿ, ಕೊಟಾ³ ನಿಯಮಗಳು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಎನಿಸಿದಲ್ಲಿ ತನಿಖಾ ದಳದೊಂದಿಗೆ ದಾಳಿ ನಡೆಸುವಂತೆ ಸೂಚಿಸಿದರು.
ಅಧಿಕಾರಿಗಳಿಗೆ ನಿರ್ದೇಶನ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವಂತಹ ಎಲ್ಲ ವಸತಿ ನಿಲಯಗಳು ಮತ್ತು ಸಂಸ್ಥೆಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಸಂಸ್ಥೆಗಳನ್ನಾಗಿ ಘೋಷಣೆ ಮಾಡಲು ಕ್ರಮ ವಹಿಸಬೇಕು. ಪ್ರವಾಸೋದ್ಯಮ ಇಲಾಖೆಯಡಿ ವಿವಿಧ ಪ್ರಮುಖ ಪ್ರವಾಸಿ ಸ್ಥಳಗಳನ್ನು ತಂಬಾಕು ಮುಕ್ತವನ್ನಾಗಿ ಘೋಷಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಬಲರಾಮ ಲಮಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ರಾಜಕುಮಾರ ಯರಗಲ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಜೈಬುನ್ನಿಸಾ ಬೀಳಗಿ, ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ| ಸಂಪತ್ ಗುಣಾರಿ, ಜಿಲ್ಲಾ ತಂಬಾಕು ಸಲಹೆಗಾರ ಡಾ| ಪ್ರಕಾಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.