Advertisement

ಜಿಲ್ಲಾಡಳಿತದಿಂದ ದಕ್ಷಿಣ ಕನ್ನಡದಲ್ಲಿ ಇನ್ನೂ 2 ದಿನ ನಿರ್ಬಂಧ ವಿಸ್ತರಣೆ

06:30 PM Jul 31, 2022 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿದೆ.

Advertisement

ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ  ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಆಗಸ್ಟ್ 1 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು  ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಅನುಗುಣವಾಗಿ ಈಗ ಆಗಸ್ಟ್  3 ರವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ಲಭ್ಯವಿರುತ್ತವೆ.

ಪೊಲೀಸರು ಜಿಲ್ಲಾ ಗಡಿಗಳಲ್ಲಿ ಮತ್ತು ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ, ಸಾಮಾಜಿಕ ತಾಣಗಳ ಮೇಲೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next