Advertisement

ಜಮ್ಮುವಿನಲ್ಲಿ ಎಲ್ಲಾ ನಿರ್ಬಂಧ ತೆರವು, ಕಾಶ್ಮೀರದಲ್ಲಿ ಮುಂದುವರಿಕೆ; ಪೊಲೀಸ್ 

12:13 PM Aug 15, 2019 | Team Udayavani |

ಶ್ರೀನಗರ್:ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಜಮ್ಮುವಿನಾದ್ಯಂತ ವಿಧಿಸಿದ್ದ ನಿರ್ಬಂಧವನ್ನು ಸರ್ಕಾರ ಸಂಪೂರ್ಣವಾಗಿ ತೆರವುಗೊಳಿಸಿದೆ. ಆದರೆ ಕಾಶ್ಮೀರದಲ್ಲಿ “ಕೆಲವು” ಸಮಯದವರೆಗೆ ನಿರ್ಬಂಧ ಮುಂದುವರಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ನಿಯಂತ್ರಣದಲ್ಲಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಆಗಸ್ಟ್ 4ರಿಂದ ಜಮ್ಮು-ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಎಲ್ಲೆಡೆ ನಿರ್ಬಂಧ ವಿಧಿಸಲಾಗಿದೆ.

ಜಮ್ಮು ಪ್ರದೇಶದಲ್ಲಿ ವಿಧಿಸಿದ್ದ ನಿರ್ಬಂಧವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಕಾಶ್ಮೀರದ ಕೆಲವು ಭಾಗಗಳಲ್ಲಿ ಕೆಲವು ಸಮಯದವರೆಗೆ ಮುಂದುವರಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮುನೀರ್ ಖಾನ್ ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಯಾವುದೇ ದೊಡ್ಡ ಮಟ್ಟದ ಅಹಿತಕರ ಘಟನೆ ನಡೆದಿಲ್ಲ, ಸಣ್ಣ-ಪುಟ್ಟ ಘಟನೆ ನಡೆದಿದೆ. ಜನರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next