Advertisement

ವಿಧಾನಸೌಧಕ್ಕೂ ತಟ್ಟಿದ ಕೊರೊನಾ ಆತಂಕ ಗ್ಯಾಲರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

10:16 AM Mar 17, 2020 | Sriram |

ವಿಧಾನಸಭೆ:ಕೊರೊನಾ ಆತಂಕ ವಿಧಾನಸೌಧಕ್ಕೂ ತಟ್ಟಿದ್ದು, ವಿಧಾನಸಭೆ ಕಲಾಪ ವೀಕ್ಷಿಸಲು ಬರುವ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

Advertisement

ಮಾರ್ಚ್‌ 17 ರಿಂದ 20 ರವರೆಗೆ ಸ್ಪೀಕರ್‌ ಗ್ಯಾಲರಿ ಹಾಗೂ ಸಾರ್ವಜನಿಕರ ಗ್ಯಾಲರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಸೋಮವಾರ ಸದನದಲ್ಲಿ ಈ ಕುರಿತು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಕಟಣೆ ಹೊರಡಿಸಿದ್ದು, ಕೊರೊನಾ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಗ್ಯಾಲರಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಶಾಸಕರು ಹಾಗೂ ಸಚಿವರು ಸಹ ಗ್ಯಾಲರಿ ಪ್ರವೇಶ ಕೋರಿ ಮನವಿ ಸಲ್ಲಿಸಬಾರದು. ಪಾಸ್‌ ಸಹ ವಿತರಿಸಬಾರದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next