ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಸಂದರ್ಭ ರಥೋತ್ಸವ ಸೇವೆಗಳಿಗೆ ಮುಂಗಡ ನೊಂದಾಯಿಸಿಕೊಂಡಿರುವ ಭಕ್ತರನ್ನು ಹೊರತುಪಡಿಸಿ ಮಹೋತ್ಸವದ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ದೇಗುಲಕ್ಕೆ ಹಾಗೂ ರಥಬೀದಿಗೆ ಡಿ. 17ರಿಂದ 20ರ ವರೆಗೆ ಇತರ ಭಕ್ತರ ಆಗಮನವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕ್ರಮ ಜರಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ತಲಕಾಡು ಪಂಚಲಿಂಗದರ್ಶನ ಮಹೋತ್ಸವ: ಏಕಕಾಲದಲ್ಲಿ ಪಂಚಲಿಂಗಗಳಿಗೂ ಮಹಾನ್ಯಾಸಪೂರ್ವಕ ರುದ್ರಾಭಿಷೇಕ
ಬೀದಿ ಮಡೆಸ್ನಾನ ಆರಂಭ
ಚಂದ್ರಮಂಡಲೋತ್ಸವದ ಬಳಿಕ ಸುಬ್ರಹ್ಮಣ್ಯನಿಗೆ ಅತ್ಯಂತ ಪ್ರೀಯವಾದ ಬೀದಿ ಮಡೆಸ್ನಾನ ಸೇವೆಯನ್ನು ಭಕ್ತರು ಆರಂಭಿಸಿದರು. ಬೀದಿ ಮಡೆಸ್ನಾನ ಸೇವೆಯನ್ನು ಭಕ್ತರು ಲಕ್ಷದೀಪೋತ್ಸವ ರಥೋತ್ಸವದ ಬಳಿಕ ಆರಂಭಿಸಿ ಚಂಪಾಷಷ್ಠಿ ಮಹಾರಥೋತ್ಸವದ ತನಕ ನೆರವೇರಿಸುತ್ತಾರೆ.