Advertisement
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನ ಸಭಾ ಚುನಾವಣ ಫಲಿತಾಂಶವು ಇವಿಎಂ ವ್ಯವಸ್ಥೆಯನ್ನು ಅನುಮಾನದಿಂದ ನೋಡು ವಂತೆ ಮಾಡಿದೆ. ನಮ್ಮ ನಿರೀಕ್ಷೆಗಳೆಲ್ಲವೂ ಉಲ್ಟಾ ಆಗಿವೆ. ಇವಿಎಂಗಳನ್ನು ಅತ್ಯಂತ ಕೌಶಲದಿಂದ ನಿಯಂತ್ರಣ ಮಾಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿ ದರು. ಈ ಕಾರಣಕ್ಕಾಗಿಯೇ ನಾವು ಬ್ಯಾಲೆಟ್ ಪೇಪರ್ ಮರಳಿ ತರಬೇಕೆಂದು ಮನವಿ ಮಾಡುತ್ತಿದ್ದೇವೆ. ಆದರೆ ಚುನಾವಣ ಆಯೋಗ ಇದನ್ನು ನಿರಾಕರಿಸುತ್ತಲೇ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹ್ಯಾಕ್ ಮಾಡುವುದರಲ್ಲಿ ಬಿಜೆಪಿಗರು ನಿಪುಣರು. ಎಲ್ಲಿಯವರೆಗೆ ಇವಿಎಂ ಇರು ತ್ತದೆಯೋ ಅಲ್ಲಿಯವರೆಗೆ ಚುನಾವಣೆಗಳಲ್ಲಿ ಬಿಜೆಪಿಯೇ ಗೆಲ್ಲುತ್ತಿರುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ. ಝಾರ್ಖಂಡ್‌ನಲ್ಲಿ ಯಾಕೆ ಮಾಡಿಲ್ಲ ಅಂದರೆ, ಕೆಲವು ಕಡೆ ಬೇಕೆಂದೇ ಬಿಟ್ಟು ಬಿಡುತ್ತಾರೆ. ಇವಿಎಂ ಹ್ಯಾಕ್ ಮಾಡಲು ಆಗುವುದಿಲ್ಲ ಎಂದು ಈ ಮೂಲಕ ಜನರನ್ನು ನಂಬಿಸುವ ತಂತ್ರಗಾರಿಕೆ ಅವರದ್ದಾಗಿದೆ. ಗೆದ್ದೇ ಗೆಲ್ಲುತ್ತೇವೆ ಎಂದು ಖಚಿತವಾಗಿರುವ ಕಡೆ ಹಾಗೇ ಬಿಡುತ್ತಾರೆ. ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಳಿಕ ದೊಡ್ಡ ನಾಯಕತ್ವ ಇರಲಿಲ್ಲ. ಆ ಕಾರಣಕ್ಕಾಗಿ ನಮ್ಮ ರಾಜ್ಯವನ್ನು ಬಿಟ್ಟರು ಎಂದು ಪರಮೇಶ್ವರ್ ಸಮಜಾಯಿಷಿ ನೀಡಿದರು. ಚುನಾವಣ ಆಯೋಗಕ್ಕೆ ಮನವಿಗೆ ನಿರ್ಧಾರ
ಪಕ್ಷದ ಮುಖಂಡರು ಈ ಬಗ್ಗೆ ಚರ್ಚೆ ನಡೆಸಿದ್ದು, ಇವಿಎಂ ಸಮಸ್ಯೆಗೆ ಸಂಬಂಧ ಪಟ್ಟಂತೆ ಚುನಾವಣ ಆಯೋಗಕ್ಕೆ ಮನವಿ ಮಾಡಲು ನಿರ್ಧಾರ ಮಾಡಲು ಚಿಂತಿಸಿ ದ್ದೇವೆ. ಪಕ್ಷ ಅಂತಿಮವಾಗಿ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು. ಬಹಳಷ್ಟು ಕಡೆ ಇವಿಎಂ ತಿರುಚಿದ್ದಾರೆ ಎಂಬ ಬಗ್ಗೆ ಚರ್ಚೆ ಆಯಿತು. ಬಿಜೆಪಿಯವರ “ಲಾಡ್ಲಿ ಬೆಹನ್’ ಸಾಕಷ್ಟು ಪ್ರಭಾವ ಬೀರಿತು. ಅವರು 6 ತಿಂಗಳು ಮೊದಲು ಕೊಟ್ಟರು. ಇದೆಲ್ಲವೂ ಅವರ ಕೈ ಹಿಡಿದಿದೆ ಎಂದರು.
Related Articles
Advertisement