Advertisement
ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮಕ್ಕೆ ಶುಕ್ರವಾರ ಖಾಸಗಿ ಭೇಟಿ ನಿಮಿತ್ತ ಆಗಮಿಸಿದ ಮುಖ್ಯಮಂತ್ರಿಗಳು ಹೆಲಿಪ್ಯಾಡ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬೆಳೆಯಲಾಗಿದ್ದು, ಬೆಂಬಲಬೆಲೆ ಯೋಜನೆಯಡಿ ಹೆಚ್ಚಿನ ರಾಗಿ ಖರೀದಿಸುವಂತೆ ಈಗಾಗಲೇ ಕೇಂದ್ರ ಮಂತ್ರಿಗಳೊಂದಿಗೆ ಸಮಾಲೋಚನೆ ಮಾಡಲಾಗಿದ್ದು, ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮತ್ತೂಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೆಚ್ಚಿನ ರಾಗಿ ಖರೀದಿಗೆ ಸಂಬಂಧಪಟ್ಟಂತೆ ಬಹುತೇಕವಾಗಿ ಇನ್ನೇರೆಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
Related Articles
Advertisement
ಲೋಕೋಪಯೋಗಿ ಇಲಾಖೆ ವತಿಯಿಂದ 2.5 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ತಾಲೂಕಿನ ಪಂಡ್ರಹಳ್ಳಿ-ಬೊಮ್ಮೆನಹಳ್ಳಿ-ಸಿರಿಗೆರೆ-ಹಿರೇಗುಂಟನೂ ರು ರಸ್ತೆ ಸುರಕ್ಷತಾ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ, ರಾಜ್ಯ ರಸ್ತೆ ಸಾರಿಗೆ ನಿಮಗದ ಅಧ್ಯಕ್ಷರೂ ಹಾಗೂ ಶಾಸಕ ಎ.ಚಂದ್ರಪ್ಪ, ಚಿತ್ರದುರ್ಗ ಶಾಸಕ ಜಿ.ಹೆಚ್ .ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ವೈ.ಎ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ| ನಂದಿನಿದೇವಿ, ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶುರಾಮ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಪ್ಪ ಸೇರಿದಂತೆ ಮತ್ತಿತರರು ಇದ್ದರು.