Advertisement
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ, ಸೋಮವಾರದಿಂದ ಎರಡನೇ ಹಂತದ ಜನಸಂಕಲ್ಪ ಯಾತ್ರೆ ಆರಂಭಗೊಳ್ಳಲಿದೆ. ಸತತ ಮೂರು ದಿನ ಕಾರ್ಯಕ್ರಮಗಳಿವೆ.ಡಿಸೆಂಬರ್‌ವರೆಗೆ ಜನಸಂಕಲ್ಪ ಯಾತ್ರೆ ಮುಂದುವರಿಯಲಿದೆ. ಅಭೂತಪೂರ್ವ ಬೆಂಬಲ ಎಲ್ಲೆಡೆ ದೊರೆಯುತ್ತಿದೆ. ಈ ಬಾರಿ ಮುಂಬಯಿ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದು, ಇದು ನಮ್ಮ ಮುಂದಿನ ವಿಜಯಕ್ಕೆ ಪುಷ್ಟಿ ನೀಡುತ್ತಿದೆ ಎಂದರು.
ನವೆಂಬರ್ 20ರಂದು ಬಳ್ಳಾರಿಯಲ್ಲಿ ಎಸ್.ಟಿ. ಮೋರ್ಚಾ ಹಾಗೂ ನ. 30ರಂದು ಮೈಸೂರಿನಲ್ಲಿ ಎಸ್.ಸಿ. ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದರು. ನ. 11ಕ್ಕೆ ಪ್ರಧಾನಿ ಭೇಟಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 11ರಂದು ರಾಜ್ಯಕ್ಕೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ – ಚೆನ್ನೈ- ಮೈಸೂರು- ಬೆಂಗಳೂರು ರೈಲನ್ನು ಉದ್ಘಾಟಿಸಲಿದ್ದಾರೆ. ಇದು ಬಹಳ ದಿನಗಳ ನಮ್ಮ ಬೇಡಿಕೆಯಾದ ಹೈಸ್ಪೀಡ್ ರೈಲನ್ನು ಪ್ರಧಾನಿಗಳು ಈಡೇರಿಸುತ್ತಿದ್ದಾರೆ. ಜತೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಟರ್ಮಿನಲ್ ಉದ್ಘಾಟಿಸಲಿದ್ದಾರೆ.
Related Articles
Advertisement
ಎರಡೂ ಟರ್ಮಿನಲ್ ಕೂಡಿದರೆ, ದಿಲ್ಲಿಯ ಅನಂತರ ದೇಶದ ಅತೀ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಕರ್ನಾಟಕ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಲಿದೆ.
ಪ್ರವಾಸೋದ್ಯಮ, ಕೈಗಾರಿಕೆ, ಐ.ಟಿ., ಬಿ.ಟಿ., ಆರ್.ಆ್ಯಂಡ್ ಡಿ ವಲಯಗಳಿಗೂ ದೊಡ್ಡ ಅನುಕೂಲ ವಾಗಲಿದೆ ಇದೇ ವೇಳೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಕೆಂಪೇಗೌಡರ ಪ್ರತಿಮೆಯೂ ಅನಾವರಣನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣವಾಗುತ್ತಿದೆ. ಕೆಂಪೇಗೌಡರು ವಿಕಾಸ ಪುರುಷರು. ಹೀಗಾಗಿ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಇಡೀ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳಿಂದ ಇದು ಉದ್ಘಾಟನೆಯಾಗುತ್ತಿರುವುದು ಅತ್ಯಂತ ಯೋಗ್ಯವಾಗಿದೆ. ಅನಂತರ ಸಾರ್ವಜನಿಕ ಕಾರ್ಯಕ್ರಮವಿರಲಿದೆ ಎಂದು ಸಿಎಂ ಹೇಳಿದರು.ರು.