Advertisement

ಶಿರ್ವ : ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಹೆಚ್‌. ಸುರೇಂದ್ರ ಶೆಟ್ಟಿ ನಿಧನ

11:42 AM Oct 03, 2022 | Team Udayavani |

ಶಿರ್ವ : ಶಿರ್ವದ ಮೂಲ್ಕಿ ಸುಂದರ್‌ ರಾಮ್‌ ಶೆಟ್ಟಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಹೆಚ್‌. ಸುರೇಂದ್ರ ಶೆಟ್ಟಿ (66) ಅವರು ಅ. 3ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Advertisement

ಸುಮಾರು 35 ವರ್ಷಗಳಿಗೂ ಹೆಚ್ಚು ಕಾಲ ಶಿರ್ವದ ಎಂಎಸ್‌ಆರ್‌ಎಸ್‌ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು ಕಾಲೇಜಿನ ವಿದ್ಯಾರ್ಥಿಗಳನ್ನು ಮಂಗಳೂರು ವಿ.ವಿ.ಯ ಕ್ರೀಡಾಪಟುಗಳನ್ನಾಗಿ ರೂಪಿಸುವಲ್ಲಿ ಯಶಸ್ವಿಯಾಗಿದ್ದರು.

ನಿವೃತ್ತಿ ಬಳಿಕ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ : ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next