ಹೊಸದಿಲ್ಲಿ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಇಂದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ನಿನ್ನೆಯಷ್ಟೆ ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ:ನಾಳೆ ಸಿಎಂ ದೆಹಲಿ ಪ್ರವಾಸ: ಸಚಿವ ಸ್ಥಾನಾಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ
Related Articles
ಆರಕ್ಷಕ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ ಅವರು ಶನಿವಾರ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು.