Advertisement
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬುಧವಾರ ಮಧ್ಯಾಹ್ನ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿದ್ದಾಗಲೇ ಇಹಲೋಕ ತ್ಯಜಿಸಿದ್ದಾರೆ. ಪತ್ನಿ ಮೇರಿಯಂಡ ಲೀಲಾ ಹಾಗೂ ನಾಲ್ವರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಪ್ರತಿನಿಧಿಗಳು ಅಂತಿಮ ಸಂಸ್ಕಾರದ ಸಂದರ್ಭ ಗೌರವ ನಮನ ಸಲ್ಲಿಸಲಿದ್ದಾರೆ. ನಾಲ್ಕು ದಶಕಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಲೆμrನೆಂಟ್ ಜನರಲ್‌ನಂತಹ ಉನ್ನತ ಪದವಿಯನ್ನು ಅಲಂಕರಿಸಿದ ಬಿ.ಸಿ.ನಂದ, ಭೂಸೇನೆಯ ಉತ್ತರ ವಲಯದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಅದ್ವಿತೀಯ ಸೇವಾ ಅವಧಿಯಲ್ಲಿ ಪರಮ ವಿಶಿಷ್ಟ ಸೇವಾ ಮೆಡಲ್ ಮತ್ತು ಅತಿ ವಿಶಿಷ್ಟ ಸೇವಾ ಮೆಡಲ್ ಪುರಸ್ಕೃತ ರಾದವರು. ನಿವೃತ್ತಿಯ ಬಳಿಕ ಕೊಡಗು ವನ್ಯಜೀವಿ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್‌ನ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸರಕಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಪ್ರಥಮ ಸೇನಾಧಿಕಾರಿ ಎಂಬುದು ಬಿ.ಸಿ.ನಂದ ಅವರ ಹೆಗ್ಗಳಿಕೆ.