Advertisement
ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಆಗದ ಮತ್ತು ಆಧಾರ್ ಸಂಖ್ಯೆ ನಿಷ್ಕ್ರಿಯವಾದ ಕಾರಣ 2,191 ಪ್ರಕರಣಗಳಲ್ಲಿ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಸರಕಾರದಿಂದ ಹಣವನ್ನು ಜಮೆ ಮಾಡಲಾಗಿದ್ದರು ರೂ. 2.58 ಕೋಟಿ ವಾಪಸ್ಸಾಗಿರುತ್ತದೆ.2,191 ಪ್ರಕರಣಗಳ ಪಟ್ಟಿಯನ್ನು ಕೊಡಗು ಜಿಲ್ಲಾ ವೆಬ್‌ಸೈಟ್ ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚು ರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
Related Articles
Advertisement
ಪರಿಹಾರ ನೇರ ಪಾವತಿಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕ ಮನೆಗಳಿಗೆ ಹಾನಿ ಮತ್ತು ಭೂಕುಸಿತ ಉಂಟಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗದ್ದೆ, ತೋಟಗಳು ಕೊಚ್ಚಿ ಹೋಗಿದ್ದು, ಕೆಲವು ಭಾಗಗಳಲ್ಲಿ ಗದ್ದೆ ತೋಟಗಳಲ್ಲಿ ಮಣ್ಣು ತುಂಬಿಕೊಂಡು ಕೆಲವು ಭಾಗಗಳಲ್ಲಿ ಅತಿಯಾದ ಮಳೆಯಿಂದಾಗಿ ಫಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿದ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ 33,920 ಸಂತ್ರಸ್ತರಿಗೆ 44.92 ಕೋಟಿ ರೂ.ಗಳನ್ನು ಸಂತ್ರಸ್ತರ ಆಧಾರ್ ಜೋಡಣೆ ಆದ ಬ್ಯಾಂಕ್ ಖಾತೆಗಳಿಗೆ ಆಧಾರ್ ಬೇಸ್ಡ್ ಪೇಮೆಂಟ್ ಮೂಲಕ ಜಮೆ ಮಾಡಲಾಗಿತ್ತು.