Advertisement

ರೇವಣ್ಣ ಕೂಡ ಸಿಎಂ ಸ್ಥಾನಕ್ಕೆ ಅರ್ಹ: ಸಿದ್ದರಾಮಯ್ಯ

08:59 AM May 17, 2019 | Vishnu Das |

ಬೆಂಗಳೂರು : ಎಚ್‌.ಡಿ.ರೇವಣ್ಣ ಅವರೂ ಸಿಎಂ ಸ್ಥಾನದ ಅರ್ಹತೆ ಉಳ್ಳವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಟ್ವೀಟ್‌ ಮಾಡಿದ್ದಾರೆ.

Advertisement

ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ‌ ಕೂಡಿ ಬರಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ಚಿಂಚೋಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದಲ್ಲಿ ಖರ್ಗೆ ಅವರೇ ಮುಖ್ಯಮಂತ್ರಿಯಾಗಬೇಕಿತ್ತು ಎಂದು ಹೇಳಿಕೆ ನೀಡಿದ್ದರು.

ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಇಂದೇ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಲಿ. ಖರ್ಗೆ ಅವರನ್ನು ಸಿಎಂ ಮಾಡಲಿ ಎಂದು ಸವಾಲು ಹಾಕಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next