Advertisement

ಹಾಡುಗಳಲ್ಲಿ ಕಥೆ ರಿವೀಲ್‌

11:43 AM Dec 20, 2018 | |

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ರಿವೀಲ್‌’ ಚಿತ್ರದ ಆಡಿಯೋ ಇತ್ತೀಚೆಗೆ ಹೊರಬಂದಿದೆ. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಲಹರಿ ವೇಲು, ಚಿತ್ರದ ಆಡಿಯೋವನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. “ರಿವೀಲ್‌’ ಚಿತ್ರದಲ್ಲಿ ನವ ಪ್ರತಿಭೆ ಅದ್ವೆತ್‌ ನಾಯಕನಾಗಿ, ಆದ್ಯಾ ಆರಾಧ್ಯ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

Advertisement

ಉಳಿದಂತೆ ಪ್ರಸನ್ನ, ರವಿಕಿರಣ್‌ ಮೊದಲಾದ ಕಲಾವಿದರ ತಾರಾಗಣ ಚಿತ್ರದಲ್ಲಿದೆ. ಮಡಿಕೇರಿಯಿಂದ ಸುಮಾರು ನಲವತ್ತು  ಕಿ.ಮೀ ದೂರದಲ್ಲಿರುವ ಅರಮನೆಗೆ ಸಂಬಂಧಪಟ್ಟ ಕಥೆ ಚಿತ್ರದಲ್ಲಿದ್ದು, ಸಸ್ಪೆನ್ಸ್‌, ಥ್ರಿಲ್ಲರ್‌ ಶೈಲಿಯಲ್ಲಿ ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಜಯ್‌ ಯಾಡ್ಲಿ  ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಜಯ ಸುಧಾಕರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಮುರಳಿ ಎಸ್‌.ವೈ ಚಿತ್ರವನ್ನು ನಿರ್ದೇಶಿಸಿದ್ದಾರೆ. 

ಮಡಿಕೇರಿ, ದಾವಣಗೆರೆ, ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಛಾಯಗ್ರಾಹಕ ರವಿ ಸುವರ್ಣ ರಿವೀಲ್‌ ಚಿತ್ರದ ದೃಶ್ಯಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಶಿವಪ್ರಸಾದ್‌ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಹಾಡುಗಳ ಮೂಲಕ ಹೊರಬಂದಿರುವ ರಿವೀಲ್‌ ಮುಂದಿನ ಜನವರಿ ವೇಳೆಗೆ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆ ಇದೆ. 

Advertisement

Udayavani is now on Telegram. Click here to join our channel and stay updated with the latest news.

Next