Advertisement
ನಗರದಲ್ಲಿ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿ, ಮನೆಯವರೊಂದಿಗೆ ಮಾತುಕತೆ ನಡೆಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
Related Articles
Advertisement
ವಿನಯ ಕುಲಕರ್ಣಿ, ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧೆ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ವಿನಯ್ ವಿರುದ್ಧ ಸಿಬಿಐ ಅಸ್ತ್ರ ಬಳಸಲಾಗಿದೆ. ಅದಕ್ಕೆ ಇಂಥ ಕೆಲಸ ಮಾಡಿಸುತ್ತಿದ್ದಾರೆ. ದ್ವೇಷ ಸಾಧನೆಗೋಸ್ಕರ ಇಂಥ ಕೆಲಸ ಮಾಡುತ್ತಿದ್ದಾರೆ. ಇವರೇನು ಐದು ನೂರು ವರ್ಷ ಬದುಕುತ್ತಾರಾ? ಬಿಜೆಪಿಯ ರಾಜಕೀಯ ಸಿದ್ಧಾಂತವೇ ಅಸೂಯೆ, ದ್ವೇಷ. ಇದನ್ನು ಸಾಧಿಸಲು ಇರುವುದೆ ಬಿಜೆಪಿ. ಬಿಜೆಪಿಯವರು ದಮನ ನೀತಿ ಅನುಸರಿಸುತ್ತಿದ್ದಾರೆ. ಇದನ್ನು ರಾಜಕೀಯವಾಗಿ ಎದುರಿಸಲು ಸಹ ನಾವು ಸಿದ್ಧ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ವಿನಯ ಪರ ಇದೆ. ಈ ಘಟನೆ ವಿರುದ್ಧ ನಾವು ಹೋರಾಡುತ್ತೇವೆ. ಬಿಜೆಪಿ ಇಡಿ, ಸಿಬಿಐಗಳನ್ನ ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎನ್ನುವುದು ಗೊತ್ತಿದೆ ಎಂದು ಬಿ.ಕೆ.ಹರಿಪ್ರಸಾದ್ ಕಿಡಿಕಾರಿದರು.
ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ, ರಜತ ಉಳ್ಳಾಗಡ್ಡಿಮಠ, ರಾಜ್ಯ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಇಮ್ರಾನ್ ಕಳ್ಳಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.