Advertisement

Revenue: ಕಂದಾಯ ಇಲಾಖೆ ಅಧಿಕಾರಿಗಳು ಆಧುನಿಕ ಭಸ್ಮಾಸುರರು: ಸಚಿವ ಕೃಷ್ಣ ಭೈರೇಗೌಡ

11:00 PM Nov 17, 2023 | Team Udayavani |

ಹಾಸನ: ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಆಧುನಿಕ ಭಸ್ಮಾಸುರರು ಎಂದು ಹೇಳುವ ಮೂಲಕ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಲಾಖೆಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಜಿಲ್ಲಾ ಪಂಚಾಯತ್‌ ಹೊಯ್ಸಳ ಸಭಾಂಗಣದಲ್ಲಿ ಜರಗಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಸಾರ್ವಜನಿಕರ ಹಣದಿಂದ ಸಂಬಳ ಪಡೆದು ಸಕಾಲದಲ್ಲಿ ಕೆಲಸ ಮಾಡಿಕೊಡದೆ ಅವರ ತಲೆ ಮೇಲೆಯೇ ಕೈ ಇಡುವ ಮೂಲಕ 21ನೇ ಶತಮಾನದ ಭಸ್ಮಾಸುರರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಕಂದಾಯ ಇಲಾಖೆಯ ಬಾಕಿ ಕಡತಗಳ ವಿವರ ನೀಡಿದರು.

ಎಲ್ಲ ಇಲಾಖೆಗಳ ಮಾತೃ ಇಲಾಖೆ ಕಂದಾಯ ಇಲಾಖೆ. ಇದು ಜನರ ಮೇಲೆ ನೇರ ಪರಿಣಾಮ ಬೀರುವ ಇಲಾಖೆಯಾಗಿದ್ದು, ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಮೇಲೆ ಹೆಚ್ಚು ಜವಾಬ್ದಾರಿಯಿದೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಜನರನ್ನು ಕಚೇರಿಗೆ ಅಲೆದಾಡಿಸುವುದರಿಂದ ಸರಕಾರಕ್ಕೂ ಕೆಟ್ಟ ಹೆಸರು ಬರುತ್ತದೆ ಎಂದರು.

ಶಾಸಕರ ಅಧ್ಯಕ್ಷತೆಯಲ್ಲಿ ಬಗರ್‌ಹುಕುಂ ಸಕ್ರಮ ಸಮಿತಿಗಳು ರಚನೆಯಾಗಿವೆ. ನ್ಯಾಯಾಲಯದ ನಿರ್ದೇಶನದಂತೆ 6 ತಿಂಗಳುಗಳಲ್ಲಿ ಅರ್ಜಿಗಳ ವಿಲೇವಾರಿಯಾಗಬೇಕು. ಆದರೆ ಲೋಕಸಭಾ ಚುನಾವಣೆ ಬರುತ್ತಿರುವುದರಿಂದ ಶೀಘ್ರ ಅರ್ಜಿಗಳ ವಿಲೇವಾರಿ ಆಗಲೇಬೇಕು. ಶಾಸಕರನ್ನು ಕಾಡಿ ಬೇಡಿಯಾದರೂ ತಹಶೀಲ್ದಾರರು ತಿಂಗಳಲ್ಲಿ 2 ಸಭೆಗಳನ್ನು ನಡೆಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು.

-ಕೃಷ್ಣ ಭೈರೇಗೌಡ, ಕಂದಾಯ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next