Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಸಭೆಯಲ್ಲಿ, ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ-ಸಕ್ರಮ ಕುರಿತು ಸೋಮವಾರ ಅಥವಾ ಮಂಗಳವಾರ ಅಧಿಸೂಚನೆ ಹೊರಡುವ ಸಾಧ್ಯತೆಯಿದ್ದು ನಾಲ್ಕು ತಿಂಗಳ ಕಾಲ ಅರ್ಜಿ ಸಲ್ಲಿಸಲು ಸರ್ಕಾರ ಕಾಲಾವಕಾಶ ಮಾಡಿಕೊಡಲಿದೆ.
Related Articles
Advertisement
ಒಂದೊಮ್ಮೆ ರಾಜ್ಯ ಸರ್ಕಾರ ಸರ್ಕಾರ ನೀಡುವ ಕಾಲಾವಕಾಶದೊಳಗೆ ಅಕ್ರಮ- ಸಕ್ರಮ ಮಾಡಿಸಿಕೊಳ್ಳದಿದ್ದರೆ ನಂತರ ಯಾವುದೇ ಮುಲಾಜಿಲ್ಲದೆ ಕಟ್ಟಡಗಳ ತೆರವು ಕಾರ್ಯ ನಡೆಯಲಿದೆ ಎಂದು ಹೇಳಿದರು.
ರೆವಿನ್ಯೂ ಬಡಾವಣೆಗಳ ನಿವೇಶನ ಹಾಗೂ ಅದರಲ್ಲಿನ ಕಟ್ಟಡಗಳ ಸಕ್ರಮಕ್ಕೆ ಸಂಬಂಧಿಸಿದಂತೆ ಎಷ್ಟೇ ದೊಡ್ಡ ನಿವೇಶನ ಇದ್ದರೂ ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ, ಪ್ರದೇಶ ಮತ್ತು ವಿಸ್ತೀರ್ಣದ ಆಧಾರದ ಮೇಲೆ ದಂಡ ಕಟ್ಟಬೇಕಾಗುತ್ತದೆ. 2013ರ ಅಕ್ಟೋಬರ್ 19ಕ್ಕೂ ಮೊದಲು ನಿಯಮ ಉಲ್ಲಂ ಸಿ ಕಟ್ಟಿದ ಕಟ್ಟಡ ಮತ್ತು ಅಕ್ರಮ ಬಡಾವಣೆಗಳಲ್ಲಿನ ನಿವೇಶನಗಳ ಸಕ್ರಮಕ್ಕೆ ಯೋಜನೆ ಅನ್ವಯ ಆಗುತ್ತದೆ ಎಂದು ತಿಳಿಸಿದರು.
ಸರ್ಕಾರಿ ಜಮೀನು, ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಪ್ರದೇಶ, ಆಟದ ಮೈದಾನ, ಕೆರೆ, ರಾಜಕಾಲುವೆ, ಉದ್ಯಾನವನದಲ್ಲಿ ನಿರ್ಮಾಣಗೊಂಡಿರುವ ರೆವಿನ್ಯೂ ಬಡಾವಣೆಗಳಲ್ಲಿನ ನಿವೇಶನ ಹಾಗೂ ಕಟ್ಟಡಗಳು ಯಾವುದೇ ಕಾರಣಕ್ಕೂ ಸಕ್ರಮವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ರಮ-ಸಕ್ರಮದಿಂದ ಬರುವ ಹಣವನ್ನು ಉದ್ಯಾನವನ ಮತ್ತು ನಗರ ಮೂಲಸೌಲಭ್ಯ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ತಿಳಿಸಿದರು.
ನಿವೇಶನ ಮತ್ತು ಕಟ್ಟಡ ನಿರ್ಮಾಣದಲ್ಲಿನ ಉಲ್ಲಂಘನೆಗಳ ಬಗ್ಗೆ ಮಾಲೀಕರು ಸ್ವಯಂ ಘೋಷಣೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗುವುದು. ಆದರೆ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಪರಿಶೀಲನೆ ನಂತರ ಸಕ್ರಮಗೊಳಿಸಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಇದೀಗ ಅಧಿಸೂಚನೆ ಹೊರಡಿಸಲು ತೀರ್ಮಾನಿಸಲಾಗಿದೆ. ಮತ್ತೆ ಯಾರಾದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮುಂದಾಲೋಚನೆಯಿಂದ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಸಹ ಸಲ್ಲಿಸಿದೆ ಎಂದು ತಿಳಿಸಿದರು.
ಯಾವುದು ಸಕ್ರಮ?*ಹತ್ತು ಮಹಾನಗರ ಪಾಲಿಕೆ ಹಾಗೂ 60 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಉಲ್ಲಂ ಸಿ ನಿರ್ಮಿಸಿರುವ ವಸತಿ ಕಟ್ಟಡದ ಶೇ.50ರಷ್ಟು, ವಾಣಿಜ್ಯ ಕಟ್ಟಡ ಶೇ.25ರಷ್ಟು. *ಸಕ್ಷಮ ಪ್ರಾಧಿಕಾರದಿಂದ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಬಡಾವಣೆ ಹಾಗೂ ಅದರಲ್ಲಿ ರಚಿಸಿರುವ ನಿವೇಶನ ಮತ್ತು ಆ ನಿವೇಶನಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳು. ನಿಟ್ಟುಸಿರು
*ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ರೆವಿನ್ಯೂ ಬಡಾವಣೆಗಳಲ್ಲಿ ನಿವೇಶನ ಪಡೆದು ಮನೆ ನಿರ್ಮಿಸಿಕೊಂಡು ಎ ಖಾತೆ ದೊರೆಯದೆ ಪ್ರತಿನಿತ್ಯ ಆತಂಕದಲ್ಲಿವೆ. ಸರ್ಕಾರದ ಕ್ರಮದಿಂದ ಇದೀಗ ಅಂತಹ ಕುಟುಂಬಗಳು ನಿಟ್ಟುಸಿರು ಬಿಡುವಂತಾಗಿದೆ. ಅದೇ ರೀತಿ ನಗರ ಪ್ರದೇಶಗಳಲ್ಲಿ ನಕ್ಷೆ ಉಲ್ಲಂ ಸಿ ನಿರ್ಮಿಸಿರುವ ಕಟ್ಟಡ ಮಾಲೀಕರು ದಂಡ ಪಾವತಿಸಿ ಸಕ್ರಮ ಮಾಡಿಕೊಂಡು ಸ್ಥಳೀಯ ಸಂಸ್ಥೆಗಳ ತೆರವು ಕಾರ್ಯಾಚರಣೆ ತೂಗುಕತಿಯಿಂದ ಪಾರಾಗಬಹುದು.