Advertisement
ನಗರದ ಜಿಪಂ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತೆರಿಗೆ ಪರಿಷ್ಕರಣೆಗೆ ಕ್ರಮ ಕೈಗೊಂಡಿದ್ದು, ಇದರಿಂದ ಶೇ.5ರಷ್ಟು ಆದಾಯ ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
Related Articles
Advertisement
ಸರ್ಕಾರಿ ಆಸ್ತಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡರೆ ‘ಲ್ಯಾಂಡ್ ಗ್ರಾಬ್’ ಕಾಯ್ದೆಯಡಿ ಪ್ರಕರಣ ದಾಖಲಿಸಲಿ, ಯಾವುದೇ ಮುಲಾಜಿಗೆ ಒಳಗಾಗದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಒತ್ತುವರಿ ತೆರವುಗೊಳಿಸಿ: ಕೆರೆ, ಕುಂಟೆ, ಕಲ್ಯಾಣಿ, ಸರ್ಕಾರಿ ಜಾಗ ಒತ್ತುವರಿಯಾಗಿದ್ದು, ಸರ್ವೇ ಮಾಡಿ ತೆರವುಗೊಳಿಸಲಾಗಿದೆ. ಗಡಿ ಗುರುತಿಸಿ ಸರ್ಕಾರಿ ಆಸ್ತಿ ಎಂದು ಫಲಕ ಹಾಕಲಾಗುವುದು. ಇನ್ನು ಯಾರಾದರೂ ಒತ್ತುವರಿಯಲ್ಲಿದ್ದರೆ ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು, ಇಲ್ಲದಿದ್ದರೆ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಟ್ಟುನಿಟ್ಟಿನ ಸೂಚನೆ: ಮುಖ್ಯ ಮಂತ್ರಿಗಳ ಸಭೆಯಲ್ಲಿ ಸರ್ಕಾರಿ ನೌಕರರು ನಿಗತ ಅವಧಿಯಲ್ಲಿ ಕಚೇರಿಗೆ ಹಾಜರಾಗುವಂತೆ ಸಮಯ ಪಾಲನೆ ಕಟ್ಟು ನಿಟ್ಟುಗೊಳಿಸಿಲು ಆದೇಶಿಸಿದ್ದಾರೆ. ಸಾರ್ವಜನಿಕರನ್ನು ವಿನಾಕಾರಣ ಕಚೇರಿಗಳಿಗೆ ಆಲೆದಾಡಿಸುವುದನ್ನು ತಪ್ಪಿಸಲು ಸೂಚನೆ ನೀಡಿದ್ದಾರೆ. ಜತೆಗೆ ಡೀಸಿ, ಸಿಇಒ ದಿಢೀರ್ ಭೇಟಿ ನೀಡಲು ಹೇಳಿದ್ದಾರೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಎದುರಾಗಿರುವ ಬರ ನಿರ್ವಹಣೆ, ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಲಾಗಿದೆ. ಹೊಸದಾಗಿ ಕೊಳವೆಬಾವಿ ಕೊರೆಯಿಸಲು ಅನುದಾನಕ್ಕೆ ಬೇಡಿಕೆ ಇಡಲಾಗಿದೆ ಎಂದು ಹೇಳಿದರು.