Advertisement
ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಹಿಸ್ಸಾ ಸ್ಕೆಚ್, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು “ಕಂದಾಯ ದಾಖಲೆ ಮನೆ ಬಾಗಿಲಿಗೆ’ ಎಂಬ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಗೆ ಮುಖ್ಯಮಂತ್ರಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಚಾಲನೆ ನೀಡಲಿದ್ದಾರೆ. ಉಡುಪಿಯ ತೆಂಕನಿಡಿಯೂರು ಗ್ರಾಮದ ಲಕ್ಷ್ಮೀ ನಗರದಲ್ಲಿ ಮನೆಗಳಿಗೆ ಭೇಟಿ ನೀಡಿ ದಾಖಲಾತಿ ವಿತರಿಸಲಾಗುವುದು. ಕಾಪು, ಕಾರ್ಕಳ, ಬೈಂದೂರು, ಬ್ರಹ್ಮಾವರ, ಕುಂದಾಪುರ, ಹೆಬ್ರಿ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಎಡಿಸಿ ಸದಾಶಿವ ಪ್ರಭು ಹಾಜರಿದ್ದರು. ಶೀಘ್ರ ಕೋವಿಡ್ ಮುಕ್ತ ಜಿಲ್ಲೆ
ಜಿಲ್ಲೆಯಲ್ಲಿ ಎರಡು ದಿನದಿಂದ ಕೊರೊನಾ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಒಂದು ವಾರದವರೆಗೂ ಹೀಗೆ ಮುಂದುವರಿದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಗುಣಮುಖರಾದಾಗ ಕೊರೊನಾ ಮುಕ್ತ ಜಿಲ್ಲೆ ಎಂದು ಘೋಷಣೆ ಮಾಡಲಾಗುವುದು. ಪ್ರಸ್ತುತ ದಿನಕ್ಕೆ ಸರಾಸರಿ 1,300 ಮಂದಿಗೆ ಕೊರೊನಾ ಪರೀಕ್ಷೆ ಮಾಡುತ್ತಿದ್ದೇವೆ. ಹಾಗೆಯೇ ಮೊದಲ ಡೋಸ್ ನೀಡುವಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಎರಡನೇ ಡೋಸ್‌ನಲ್ಲಿ ಶೇ. 92.10ರಷ್ಟು ಸಾಧನೆಯಾಗಿದೆ. ಉಳಿದ 17 ಸಾವಿರಕ್ಕೂ ಅಧಿಕ ಮಂದಿಗೆ ಮೇಲಿಂದ ಮೇಲೆ ಸಂದೇಶ ರವಾನೆ ಮಾಡುತ್ತಿದ್ದೇವೆ. ಎರಡನೇ ಡೋಸ್‌ನಲ್ಲೂ ಶತ ಪ್ರತಿಶತ ಸಾಧನೆಗೆ ವಿಶೇಷ ಅಭಿಯಾನ ನಡೆಸುವ ಬಗ್ಗೆಯೂ ಯೋಚಿಸುತ್ತಿದ್ದೇವೆ ಎಂದು ಡಿಸಿ ತಿಳಿಸಿದರು.
Related Articles
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಾ. 12ರಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದಲ್ಲಿ ಈ ಯೋಜನೆಯನ್ನು ಉದ್ಘಾಟಿಸುವರು. ತಾಲೂಕು ಮಟ್ಟದಲ್ಲಿ ಸ್ಥಳೀಯ ವಿಧಾನಸಭಾ ಸದಸ್ಯರು ಅವರ ಕ್ಷೇತ್ರಕ್ಕೆ ಒಳಪಡುವ ಗ್ರಾಮಗಳಲ್ಲಿ ಉದ್ಘಾಟಿಸುವರು.
ದ.ಕ. ಜಿಲ್ಲೆಯಲ್ಲಿ ಒಟ್ಟು 422 ಗ್ರಾಮಗಳು ಹಾಗೂ 17 ಹೋಬಳಿಗಳಿವೆ. ಒಟ್ಟು 210375 ಆರ್‌ಟಿಸಿ, 28,328 ನಕ್ಷೆ, 2,80,348 ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಜಿಲ್ಲೆಯಲ್ಲಿ ಸ್ವೀಕರಿಸಲಾಗಿದ್ದು ಇದರಲ್ಲಿ ಒಟ್ಟು 2,14,968 ದಾಖಲೆಗಳನ್ನು ಮುದ್ರಿಸಲಾಗಿದೆ. ಎಲ್ಲ ದಾಖಲೆಗಳನ್ನು ಹಂತಹಂತವಾಗಿ ಮುದ್ರಿಸಿ ಮಾ. 21ರೊಳಗೆ ತಾಲೂಕು ಕಚೇರಿಗಳಿಗೆ ಸರಬರಾಜು ಮಾಡಲಾಗುವುದು. ತಹಶೀಲ್ದಾರ್‌ರವರ ನೇತೃತ್ವದಲ್ಲಿ 17 ಕಂದಾಯ ನಿರೀಕ್ಷಕರು, 257 ಗ್ರಾಮಕರಣಿಕರು, 345 ಗ್ರಾಮಸಹಾಯಕರು ಫಲಾನುಭವಿಗಳ ಮನೆಮನೆಗೆ ತೆರಳಿ ಕಂದಾಯ ದಾಖಲೆಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Advertisement
ಕೊಡಗು: ಮಕ್ಕಂದೂರು ಶಾಲೆಕೊಡಗು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಮಕ್ಕಂದೂರು ಶಾಲಾ ಆವರಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಶಾಸಕರು ಮತ್ತು ಜನಪ್ರತಿನಿಧಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಬಿ. ಸಿ. ಸತೀಶ ತಿಳಿಸಿದ್ದಾರೆ. ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಈ ಯೋಜನೆಯಡಿ 1.30 ಲಕ್ಷ ಆರ್‌ಟಿಸಿಗಳನ್ನು ದಾಖಲಿಸಿಕೊಳ್ಳಲಾಗಿದೆ. ಸ್ಥಳೀಯ ಭತ್ತ ಖರೀದಿ ಕಾರ್ಯ ಪಡೆಯಿಂದ ಸರಕಾರಕ್ಕೆ ಪ್ರಸ್ತಾವನೆ
ಉಡುಪಿ: ಸ್ಥಳೀಯ ಭತ್ತ ಖರೀದಿಸಿ ಸಾರ್ವಜನಿಕ ಪಡಿತರ ವ್ಯವಸ್ಥೆ (ಪಿಡಿಎಸ್)ಯಡಿ ವಿತರಿಸಲು ಅನುಕೂಲವಾಗುವಂತೆ ಭತ್ತ ಕಟಾವಿನ ಸಂದರ್ಭದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯಡಿ ಖರೀದಿಗೆ ಅವಕಾಶ ಮಾಡಿಕೊಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದರು. ಸ್ಥಳೀಯ ಭತ್ತ ಖರೀದಿಸಿ ಪಿಡಿಎಸ್ ಮೂಲಕ ವಿತರಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಹೀಗಾಗಿ ಮುಂದಿನ ವರ್ಷದಿಂದ ಭತ್ತ ಕೊರತೆ ಆಗದಂತೆ ನೋಡಿಕೊಳ್ಳುವುದು ಅಗತ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯಪಡೆಯಲ್ಲೂ ಈ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. ಭತ್ತ ಕಟಾವು ಆದ ತತ್‌ಕ್ಷಣವೇ ಬೆಂಬಲ ಬೆಲೆಯಡಿ ಖರೀದಿಸಲು ಅನುಮತಿ ಕಲ್ಪಿಸುವಂತೆ ಸರಕಾರಕ್ಕೆ ಜಿಲ್ಲಾ ಕಾರ್ಯಪಡೆಯ ಮೂಲಕ ಪ್ರಸ್ತಾವನೆ ಕಳುಹಿಸಲಿದ್ದೇವೆ. ಕಟಾವು ಆಗುತ್ತಿದ್ದಂತೆ ಎಂಎಸ್‌ಪಿ ಅಡಿಯಲ್ಲಿ ಭತ್ತ ಖರೀದಿಗೆ ಅವಕಾಶ ಸಿಕ್ಕಾಗ ರೈತರು ಬೇರೆ ಕಡೆ ಭತ್ತ ನೀಡುವುದು ತಪ್ಪುತ್ತದೆ. ಲಭ್ಯ ಭತ್ತದ ಆಧಾರದಲ್ಲಿ ಪಿಡಿಎಸ್ ಮೂಲಕ ಸ್ಥಳೀಯ ಕುಚ್ಚಲು ಅಕ್ಕಿ ವಿತರಣೆಗೂ ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿ ಭತ್ತದ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ರೈತರಲ್ಲೂ ಅರಿವು ಮೂಡಿಸುವ ಬಗ್ಗೆ ಯೋಚನೆ ನಡೆಸುತ್ತಿದ್ದೇವೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.