Advertisement

ಮನೆ ಬಾಗಿಲಿಗೆ ಕಂದಾಯ ದಾಖಲೆ ಯೋಜನೆ ಅನುಷ್ಠಾನ

01:33 PM Mar 10, 2022 | Team Udayavani |

ಚಿಕ್ಕಬಳ್ಳಾಪುರ: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆಚಾಲನೆ ನೀಡಲು ಜಿಲ್ಲೆಯ ಗುಂಗೀರ್ಲಹಳ್ಳಿಗೆಮಾ.12ರಂದು ಸಿಎಂ ಆಗಮಿಸಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ಜಿಲ್ಲೆಯ ಗುಂಗೀರ್ಲಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯ ಚಾಲನಾ ಕಾರ್ಯಕ್ರಮದ ಪೂರ್ವಸಿದ್ಧತೆಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಸಿಎಂ ಗ್ರಾಮದ ದೇವಸ್ಥಾನಕ್ಕೆ ಭೇಟಿ ನೀಡಿ,ಆವರಣದಲ್ಲಿ ಸಸಿ ನೆಡುತ್ತಾರೆ ಎಂದು ಹೇಳಿದರು.ಫ‌ಲಾನುಭವಿಗಳಿಗೆ ದಾಖಲೆ ವಿತರಣೆ: ನಂತರಮನೆಮನೆಗೆ ಭೇಟಿ ನೀಡಿ ಕಂದಾಯ ದಾಖಲೆಗಳಾದಪಹಣಿ, ಅಟ್ಲಾಸ್‌/ಹಿಸ್ಸಾ ಸ್ಕೆಚ್‌, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳು, ಇನ್ನಿತರ ದಾಖಲೆಗಳನ್ನುಒಳಗೊಂಡ ಲಕೋಟೆಯನ್ನು ಖುದ್ದಾಗಿ ರೈತರಿಗೆ,ಫಲಾನುಭವಿಗಳಿಗೆ ವಿತರಿಸುವ ಮೂಲಕ ಯೋಜ ನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಸಚಿವರುಗಳ ಭಾಗಿ: ನಂತರ ಆ ಗ್ರಾಮದಲ್ಲಿರುವ ಹಳ್ಳಿಕಟ್ಟೆಯಲ್ಲಿ ಗ್ರಾಮಸ್ಥರು, ರೈತರೊಂದಿಗೆ ಸಂವಾದನಡೆಸಲಿದ್ದಾರೆ. ಕೊನೆಯದಾಗಿ ವೇದಿಕೆಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಯೋಜನೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸರ್ಕಾರದ ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌, ಜಿಲ್ಲಾ ಉಸ್ತುವಾರಿ ಸಚಿವ ಎನ್‌. ನಾಗರಾಜು, ಆರೋಗ್ಯ ಡಾ.ಕೆ.ಸುಧಾಕರ್‌, ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಖುದ್ದು ಮನೆಗಳಿಗೆ ವಿತರಣೆ: ಜಿಲ್ಲೆಯಲ್ಲಿ ಈ ಯೋಜನೆಯಡಿ 4,72,371 ಪಹಣಿಗಳು, 78,976ಅಟ್ಲಾಸ್‌ ಪ್ರತಿಗಳು, 2,07,892 ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇನ್ನಿತರ ದಾಖಲೆಗಳನ್ನು ಉಚಿತವಾಗಿ ವಿತರಿಸಲು ಯೋಜಿಸಲಾಗಿದೆ. ಮುದ್ರಿತಗೊಂಡ ಸದರಿ ದಾಖಲೆಗಳು ಈಗಾಗಲೇ ಪ್ರತಿ ಗ್ರಾಪಂ ಕೇಂದ್ರಗಳಿಗೆ ತಲುಪಿಸಲಾಗಿದೆ. ತಾಲೂಕು ಮಟ್ಟದಲ್ಲಿ ಸ್ಥಳೀಯ ವಿಧಾನಸಭಾ ಸದಸ್ಯರು ಅವರ ಕ್ಷೇತ್ರಕ್ಕೆ ಒಳಪಡುವ ಹಳ್ಳಿಯಲ್ಲಿ ರೈತರಿಗೆ ಹಾಗೂ ಫಲಾನುಭವಿಗಳಿಗೆ ಖುದ್ದಾಗಿ ತಲುಪಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಗೂ ಮುನ್ನ ಗುಂಗೀರ್ಲಹಳ್ಳಿಗೆಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಿಎಂ ಭೇಟಿ ನೀಡುವಮನೆಗಳು, ಸ್ಥಳಗಳು, ರಸ್ತೆಗಳು, ಹಳ್ಳಿಯಕಟ್ಟೆ ಹಾಗೂವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿನ ಸಿದ್ಧತೆ ಪರಿಶೀಲಿಸಿದರು.

Advertisement

ಅಧಿಕಾರಿಗಳೊಂದಿಗೆ ಸಭೆ: ಗೋಷ್ಠಿಯ ನಂತರ ಜಿಲ್ಲಾಧಿಕಾರಿ ಆರ್‌.ಲತಾ ಸಂಬಂಧಪಟ್ಟ ಇಲಾಖೆಗಳಅಧಿಕಾರಿಗಳು, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ,ಸಿಎಂ ವಿತರಿಸುವ ದಾಖಲೆ, ವೇದಿಕೆ ಸೇರಿ ಇನ್ನಿತರಸಿದ್ಧತೆಗಳನ್ನು ಸಮರ್ಪಕವಾಗಿ ಮಾಡುವ ಕುರಿತುಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ನೀಡಿದರು.

ಜಿಪಂ ಸಿಇಒ ಪಿ.ಶಿವಶಂಕರ್‌, ಎಸ್ಪಿ ಜಿ.ಕೆ. ಮಿಥುನ್‌ಕುಮಾರ್‌, ಜಿಲ್ಲಾ ಅರಣ್ಯಾಧಿಕಾರಿಅರ್ಸಲನ್‌, ಎಸಿ ಸಂತೋಷ್‌ ಕುಮಾರ್‌, ತಹಶೀಲ್ದಾರ್‌ ಗಣಪತಿಶಾಸ್ತ್ರಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next