Advertisement
ಕೆಪಿಸಿಎಲ್‌ನ ಶಕ್ತಿ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ನೀಡಲಾದ ವಾರ್ಷಿಕ ರಾಜಸ್ವ ಸಂಗ್ರಹ ಗುರಿ 26 ಸಾವಿರ ಕೋಟಿ ರೂ. ಆಗಿದ್ದು, ಈ ಪೈಕಿ 13 ಸಾವಿರ ಕೋಟಿ ರೂ. ಸಂಗ್ರಹವಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇದುವರೆಗೆ ಶೇ.50ರಷ್ಟು ಮಾತ್ರ ಗುರಿ ಸಾಧನೆಯಾಗಿದೆ. ನಿಗದಿತ ಅವಧಿಯಲ್ಲಿ ಶೇ.100ರಷ್ಟು ಗುರಿ ಸಾಧನೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು ಎನ್ನಲಾಗಿದೆ.
ಒಳ ಮೀಸಲಾತಿ ಜಾರಿಗೊಳಿಸಲು ಸೋಮ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಸುದ್ದಿಗಾರರ ಜತೆ ಮಾಡಿನಾಡಿದ ಅವರು, ಒಳ ಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು ಎಂದು ಹೇಳಿದರು.